ಸುಳ್ಯ: ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಹಿರಿಯ ವಿದ್ಯಾರ್ಥಿ ಎಲಿಮಲೆ ಸರಕಾರಿ ಪ್ರೌಢ ಶಾಲೆ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಎಲಿಮಲೆಯಲ್ಲಿ ಜ. 19ರಂದು ನಡೆಯಲಿರುವ ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಜ.7ರಂದು ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಹರಪ್ರಸಾದ್ ತುದಿಯಡ್ಕ, ನಿಕಟಪೂರ್ವಾಧ್ಯಕ್ಷೆ ಎಂ. ಮೀನಾಕ್ಷಿ ಗೌಡ ಮಾತನಾಡಿ ಶುಭಹಾರೈಸಿದರು.
ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಶೈಲೇಶ್ ಅಂಬೆಕಲ್ಲು, ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಮೆತ್ತಡ್ಕ, ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳಾದ ಚಂದ್ರಶೇಖರ ಪೇರಾಲ್, ತೇಜಸ್ವಿ ಕಡಪಳ, ಕೋಶಾಧಿಕಾರಿ ದಯಾನಂದ ಆಳ್ವ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಜಯಂತ ತಳೂರು, ಸ್ವಾಗತ ಸಮಿತಿ ಉಪಾಧ್ಯಕ್ಷರುಗಳಾದ ರಾಧಾಕೃಷ್ಣ ಕೆ.ಆರ್.ಮಾವಿನಕಟ್ಟೆ, ಕೃಷ್ಣಯ್ಯ ಮೂಲೆತೋಟ, ಜೊತೆ ಕಾರ್ಯದರ್ಶಿ ದಯಾನಂದ ಮೆತ್ತಡ್ಕ, ಉಪಸಮಿತಿ ಸಂಚಾಲಕರುಗಳಾದ ದುರ್ಗಾಕುಮಾರ್ ನಾಯರ್‌ಕೆರೆ, ಶರತ್ ಮರ್ಗಿಲಡ್ಕ, ಮುರಳೀಧರ ಪುನ್ಕುಟ್ಟಿ, ಗದಾಧರ ಬಾಳುಗೋಡು, ತಿರುಮಲೇಶ್ವರಿ ಯು.ಎಸ್., ಓಂಪ್ರಸಾದ್ ಕಜೆ, ಹರಿಪ್ರಸಾದ್ ಬಿ.ವಿ., ಪುರುಷೋತ್ತಮ ಸುಳ್ಳಿ, ರಮಾನಂದ ಹೊಸತೋಟ, ರಂಜಿತ್ ಅಂಬೆಕಲ್ಲು, ದೀಕ್ಷಿತ್ ಚಿತ್ತಡ್ಕ, ಭರತ್ ಪಾರೆಮಜಲು, ತಾರನಾಥ ಅಡಿಗೈ, ವಿಷ್ಣು ಗೌಡ ಅಂಬೆಕಲ್ಲು, ವಸಂತ ನಾಯಕ್, ಪುನೀತ್, ಅನ್ವಿತ್ ಕೇಪಳಕಜೆ ಮೊದಲಾದವರು ಉಪಸ್ಥಿತರಿದ್ದರು.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …