ಸುಳ್ಯ: ಎಲಿಮಲೆಯಲ್ಲಿ ನಡೆಯುವ 24 ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರ ಆಯ್ಕೆಯ ಬಗ್ಗೆ ಸಮಾಲೋಚನಾ ಸಭೆಯು ಸುಳ್ಯದ ಕನ್ನಡ ಭವನದಲ್ಲಿ ನಡೆಯಿತು. ಸಾಹಿತ್ಯ ಪರಿಷತ್ ಅಧ್ಯಕ್ಷ ಹರಪ್ರಸಾದ್ ತುದಿಯಡ್ಕ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬಗ್ಗೆ ವಿವರಿಸಿದರು.ಎಲ್ಲರ ಸರ್ವಾನುಮತದ ನಿರ್ಣಯದಂತೆ ಹಿರಿಯ ಸಾಹಿತಿ- ಕವಿ ಕೃ.ಶಾ.ಮರ್ಕಂಜ ಅವರನ್ನು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸರ್ವಾನುಮತದಿಂದ ಆರಿಸಲಾಯಿತು.
ಸಮ್ಮೇಳನಗಳ ಪೂರ್ವಾಧ್ಯಕ್ಷರಾದ ಕುತ್ಯಾಳ ನಾಗಪ್ಪ ಗೌಡ, ಡಾ.ಪ್ರಭಾಕರ ಶಿಶಿಲ, ಲಲಿತಾಜ ಮಲ್ಲಾರ, ಶೀಲಾವತಿ ಕೊಳಂಬೆ, ಜಿ.ಎಸ್.ಉಬರಡ್ಕ, ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷರಾದ ಮೀನಾಕ್ಷಿ ಗೌಡ,ಎಲಿಮಲೆ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ರಾದ ಎ.ವಿ.ತೀರ್ಥರಾಮ,ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಮೆತ್ತಡ್ಕ ಹಾಗು ಸಮಿತಿಯ ಸದಸ್ಯರು, ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿ ದಯಾನಂದ ಆಳ್ವ ಹಾಗೂ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.
ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಚಂದ್ರಶೇಖರ್ ಪೇರಾಲು ಸ್ವಾಗತಿಸಿ, ತೇಜಸ್ವಿ ಕಡಪಳ ವಂದಿಸಿದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.