ಸುಳ್ಯ: ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ಎಸ್ ಎಸ್ ಎಫ್ )ಸುಳ್ಯ ಸೆಕ್ಟರ್ ಸಮಿತಿ ವತಿಯಿಂದ ಉಲಾಝ್ ತರಬೇತಿ ಶಿಬಿರ ಮೊಗರ್ಪಣೆ ಮದರಸಾ ಹಾಲ್ ನಲ್ಲಿ ನಡೆಯಿತು. ಸುಳ್ಯ ಸೆಕ್ಟರ್ ಸಮಿತಿ ಅಧ್ಯಕ್ಷ ಸ್ವಬಾಹ್ ಹಿಮಮಿ ಬೀಜಕೊಚ್ಚಿ ಅಧ್ಯಕ್ಷತೆ ವಹಿಸಿದ್ದರು.
ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಮಿತಿ ಮಾಜಿ ಅಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಉದ್ಘಾಟಿಸಿದರು. ಎಸ್ಸೆಸ್ಸೆಫ್ ಕುಂಬ್ರ ಸೆಕ್ಟರ್ ಕ್ಯೂ ಟೀಂ ಟ್ಯೂಟರ್ ಕರೀಂ ಸಖಾಫಿ ಕಟ್ಟತ್ತಾರು ಸಂಪನ್ಮೂಲ ವ್ಯಕ್ತಿಗಳಾಗಿ ವಿಷಯ ಮಂಡಿಸಿದರು. ಹಝ್ರತ್ ವಲಿಯುಲ್ಲಾಹಿ ಮಾಂಬಿಳಿ ತಂಙಳ್ ರವರ ಝಿಯಾರತ್ ಗೆ ನೂರುಲ್ ಇಸ್ಲಾಂ ಮದರಸಾ, ಮೊಗರ್ಪಣೆ ಸದರ್ ಮುಅಲ್ಲಿಂ ಮುಹಮ್ಮದ್ ಸಖಾಫಿ ಕೊಟ್ಟಮುಡಿ ನೇತೃತ್ವ ನೀಡಿದರು. ಮದರಸಾ ಮುಅಲ್ಲಿಂ ರಶೀದ್ ಝೈನಿ, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಮಿತಿ ಮಾಜಿ ಅಧ್ಯಕ್ಷ ಸಿದ್ದೀಕ್ ಕಟ್ಟೆಕಾರ್, ಸೆಕ್ಟರ್ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಗೂನಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಮಟ್ಟದ ಪ್ರತಿಭೋತ್ಸವ ಡಿಸಂಬರ್ 8 ರಂದು ಕುಂಭಕ್ಕೋಡಿನಲ್ಲಿ ನಡೆಯಲಿದ್ದು, ಅದರ ಲಾಂಚಿಗ್ ಸೆಕ್ಟರ್ ಸಮಿತಿಯ ಪ್ರಥಮ ಮತ್ತು ದ್ವಿತೀಯ ಅವಧಿಗಳ ಅಧ್ಯಕ್ಷರುಗಳಾದ ಸಿದ್ದೀಕ್ ಕಟ್ಟೆಕಾರ್ ರವರು ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ರವರಿಗೆ ಪೋಸ್ಟರ್ ನೀಡಿ ಬಿಡುಗಡೆಗೊಳಿಸಲಾಯಿತು.
ಶಫೀಕ್ ಕೊಯಂಗಿ ಸ್ವಾಗತಿಸಿ, ಶಾಕಿರ್ ಮೊಗರ್ಪಣೆ ವಂದಿಸಿದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.