ಮಂಗಳೂರು : 2020 ರ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯು ಜೂ. 25 ರಿಂದ ಜು.4 ರವರೆಗೆ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಕೇರಳ ರಾಜ್ಯದ ಸುಮಾರು 367 ವಿದ್ಯಾರ್ಥಿಗಳು ಕರ್ನಾಟಕದ ವಿವಿಧ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿದ್ದು ಪ್ರಸ್ತುತ ಜೂ 25 ರಿಂದ ಜು 4 ರವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ದ.ಕ ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗಿದೆ.
ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಲಾಕ್ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ರಾಜ್ಯಗಳ ಗಡಿ ಪ್ರದೇಶದಲ್ಲಿ ಸಾರ್ವಜನಿಕರಿಗೆ ಪ್ರಯಾಣಕ್ಕೆ ನಿರ್ಬಂಧವಿರುವುದರಿಂದ ಹಾಗೂ ವಿದ್ಯಾರ್ಥಿಗಳ ಹೆತ್ತವರಿಗೆ/ ಪೋಷಕರಿಗೆ ತಮ್ಮ ಸ್ವಂತ ವಾಹನದಲ್ಲಿ ಕೂಡಾ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಅವಕಾಶವಿಲ್ಲದಿರುವುದರಿಂದ ಜಿಲ್ಲೆಯ ಖಾಸಗಿ ಶಾಲೆಯ ಬಸ್ಸುಗಳ ಮೂಲಕ ನಿರ್ಧಿಷ್ಟಪಡಿಸಿದ ಕೇರಳ-ಕರ್ನಾಟಕ ಗಡಿ ಪ್ರದೇಶದಿಂದ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆದುಕೊಂಡು ಬಂದು ಪರೀಕ್ಷೆ ಮುಗಿದ ತಕ್ಷಣ ವಾಪಾಸು ಆಯಾ ಗಡಿ ಪ್ರದೇಶಕ್ಕೆ ತಲುಪಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಮೂಲಕ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ವಾಟ್ಸಪ್ ಮೂಲಕ ಪರೀಕ್ಷಾ ಪ್ರವೇಶ ಪತ್ರವನ್ನು ರವಾನಿಸಿದ್ದು ವಾಟ್ಸಪ್ ಮೂಲಕ ಪ್ರವೇಶ ಪತ್ರ ಸಿಗದ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನದಂದು ನೋಡಲ್ ಅಧಿಕಾರಿಗಳ ಮೂಲಕ ನಿರ್ಧಿಷ್ಟ ಪಡಿಸಿದ ಗಡಿ ಪ್ರದೇಶದಲ್ಲೇ ಪ್ರವೇಶ ಪತ್ರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಆದ್ದರಿಂದ ದ.ಕ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸಲ್ಲಿಸಿರುವ ನಿರ್ಧಿಷ್ಟಪಡಿಸಿದ ಗಡಿ ಪ್ರದೇಶ ಹಾಗೂ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.
ನಿಗದಿಪಡಿಸಿರುವ ಗಡಿ ಪ್ರದೇಶದ ಚೆಕ್ ಪೋಸ್ಟ್ ಹೀಗಿದೆ :
ಬಂಟ್ವಾಳ ತಾಲೂಕು – ಪಾತ್ತೂರು, ಮುಗುಲಿ, ಆನೆಕಲ್ ಸಾರಡ್ಕ, ಬೆರಿಪದವು, ನಂದಾರಾಪಡ್ಪು, ಕೆದಂಬಾಡಿ, ಬಾಯಾರು, ಕಾಯಾರಮರ್, ತಲಕ್ಕಿ, ಸಾಲೆತ್ತೂರು
ಮಂಗಳೂರು ತಾಲೂಕು: ತಲಪಾಡಿ, ಮಂಜನಾಡಿ ಬಸ್‍ಸ್ಟಾಂಡ್. ತಲಪಾಡಿ ಟೋಲ್‍ಗೇಟ್.
ಪುತ್ತೂರು ತಾಲೂಕು – ಅರ್ಧಮೂಲೆ, ಗಾಳಿಮುಖ, ಕಾಯರ್‍ಪದವು, ಮಯ್ಯಾಲ, ಮೆನಸಿಕಾನಾ. ಪಾಣಾಜೆ, ಪಂಚೋಡಿ, ಪಾಂಡಿ, ಪಿಲಿಪುದೆ, ಸಾರಡ್ಕ, ಸ್ವರ್ಗ, ತಲಪಾಡಿ .
ಸುಳ್ಯ ತಾಲೂಕು – ಜಾಲ್ಸೂರ್/ಮುರೂರ್, ಕೊಲ್ಚಾರ್/ಕಲ್ಲಪಳ್ಳಿ.
ಈ ಎಲ್ಲಾ ವ್ಯಾಪ್ತಿಯಲ್ಲಿ ಪರೀಕ್ಷಾ ದಿನದಂದು ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷಾ ಪ್ರವೇಶ ಪತ್ರ (ವಾಟ್ಸಾಪ್ ಮೂಲಕ ಅಥವಾ ಮೂಲ ಪ್ರತಿ/ಜೆರಾಕ್ಸ್ ಪ್ರತಿ) ಹಾಜರುಪಡಿಸಿದಲ್ಲಿ ಕರ್ನಾಟಕಕ್ಕೆ ಪ್ರವೇಶಿಸಲು ಅವಕಾಶವಿರುತ್ತದೆ ಹಾಗೂ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವ್ಯವಸ್ಥೆ ಮಾಡಲಾಗುವ ಬಸ್ಸುಗಳ ಮೂಲಕ ಪ್ರಯಾಣಿಸಿ, ಪರೀಕ್ಷೆ ಮುಗಿದ ಬಳಿಕ ಪಾಸು ಕೇರಳಕ್ಕೆ ಮರಳಲು ಅವಕಾಶ ಕಲ್ಪಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಕಳೆದ ಒಂದು ವಾರದಲ್ಲಿ ಚಾರ್ಮಾಡಿ ಘಾಟ್ನಲ್ಲಿ ಉಂಟಾದ ಎರಡನೇ ಕಾಡ್ಗಿಚ್ಚು ಪ್ರಕರಣ ಇದಾಗಿದೆ.…
ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ…
ಸಾರಡ್ಕದ ಆರಾಧನಾ ಕಲಾಭವನದಲ್ಲಿ ಜ.26 ರಂದು ಕೃಷಿ ಹಬ್ಬ ನಡೆಯಲಿದೆ.ಬೆಳಗ್ಗೆ ಉದ್ಘಾಟನೆಗೊಳ್ಳುವ ಕೃಷಿ…
ಆಮದು ಸುಂಕವನ್ನು ತಪ್ಪಿಸಲು ಹುರಿದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹುರಿದ ಅಡಿಕೆಯ ಆಮದು…
ಇತ್ತೀಚಿನ ಅಧ್ಯಯನಗಳ ಪ್ರಕಾರ, ಭಾರತವು ಜಾಗತಿಕವಾಗಿ ಪ್ಲಾಸ್ಟಿಕ್ ತ್ಯಾಜ್ಯದ ಅಗ್ರ ಉತ್ಪಾದಕ ಎಂದು…
115 ವರ್ಷಗಳ ಇತಿಹಾಸ ಇರುವ ಹಾಗೂ ರಾಜ್ಯದಲ್ಲಿ ನಿರ್ಮಾಣವಾದ ಮೊದಲ ಜಲಾಶಯ ವಾಣಿವಿಲಾಸ…