ಮಂಗಳೂರು : 2019-20ರ ಶೈಕ್ಷಣಿಕ ಸಾಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 42 ಶಾಲೆಗಳಲ್ಲಿ 6,7, 8, 9 ಮತ್ತು 10ನೇ ತರಗತಿಗಳಲ್ಲಿ ಒಟ್ಟು 2568 ವಿದ್ಯಾರ್ಥಿಗಳು ತುಳುವನ್ನು ತೃತೀಯ ಭಾಷೆಯಾಗಿ ಆಯ್ಕೆ ಮಾಡಿಕೊಂಡಿರುತ್ತಾರೆ. ಈ ಪೈಕಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ 39 ಶಾಲೆಗಳ ಒಟ್ಟು 924 ವಿದ್ಯಾರ್ಥಿಗಳಲ್ಲಿ 917 ವಿದ್ಯಾರ್ಥಿಗಳು ಪಾಸಾಗಿದ್ದು ಶೇಕಡಾ 99% ಫಲಿತಾಂಶ ದಾಖಲಿಸಿದ್ದಾರೆ. 234 ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದಿರುತ್ತಾರೆ.
ತುಳುವಿನಲ್ಲಿ ಉತ್ತಮ ಸಾಧನೆ ದಾಖಲಿಸುವ ಮೂಲಕ ಶಾಲೆಗಳ ಫಲಿತಾಂಶ ಹಾಗೂ ಜಿಲ್ಲೆಯ ಒಟ್ಟು ಫಲಿತಾಂಶದಲ್ಲಿ ಏರಿಕೆಯಾಗಿರುವುದು ಕಂಡು ಬರುತ್ತದೆ. ಇದಕ್ಕೆ ಕಾರಣರಾದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲೆಗಳ ಮುಖ್ಯ ಶಿಕ್ಷಕರು, ತುಳು ಭಾಷಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದನಾರ್ಹರು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್‍ಸಾರ್ ತಿಳಿಸಿದ್ದಾರೆ.
ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ತುಳು ಪಠ್ಯ ಭೋದನೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ತೃತೀಯ ಐಚ್ಛಿಕ ಭಾಷೆಯಾಗಿ ತುಳುವನ್ನು ಆಯ್ಕೆ ಮಾಡುವುದರಿಂದ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸಲು ಸಾಧ್ಯವಾಗುತ್ತಿದ್ದು ಈ ಮೂಲಕ ಶಾಲೆಗಳು ಕೂಡಾ ಫಲಿತಾಂಶದಲ್ಲಿ ದಾಖಲೆ ನಿರ್ಮಿಸುತ್ತಿದೆ. ಹಾಗೂ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಶಾಲೆಗಳ ಶಿಕ್ಷಕ ವರ್ಗ ಹಾಗೂ ಆಡಳಿತ ಮಂಡಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…