ಸುಳ್ಯ: ಬಂಟ್ವಾಳ ನಗರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಚಂದ್ರಶೇಖರ ಅವರಿಗೆ ಮಡಿಕೇರಿ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿದೆ. ಈ ಹಿಂದೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಅವರು 2017 ಅ.16 ರಂದು ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡಿದ್ದರು.
ಎರಡು ವರುಷಗಳ ಕಾಲ ಬಂಟ್ವಾಳ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಬಳಿಕ ಮಡಿಕೇರಿಗೆ ವರ್ಗಾವಣೆಗೊಂಡಿದ್ದಾರೆ. ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದ ಬಂಟ್ವಾಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿ ಶಾಂತಿ ನೆಲೆಸುವಂತೆ ನೋಡಿಕೊಂಡಿದ್ದರು. ಸುಳ್ಯ ಮತ್ತು ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವಧಿಯಲ್ಲಿ ದಕ್ಷ ಮತ್ತು ಜನಪರ ಅಧಿಕಾರಿ ಎಂದು ಹೆಸರು ಮಾಡಿದ್ದ ಖಡಕ್ ಅಧಿಕಾರಿ ಚಂದ್ರಶೇಖರ್ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಹೆಚ್ಚಿನ ಒತ್ತು ನೀಡಿದ್ದರು. ಹಲವಾರು ಪ್ರಕರಣಗಳನ್ನು ಭೇದಿಸಿದ್ದರು. ನ.12 ರಂದು ಅವರು ಮಡಿಕೇರಿ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel