ಸುಳ್ಯ: ಎಸ್ ಸಿಡಿಸಿಸಿ ಬ್ಯಾಂಕ್ ವತಿಯಿಂದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮೂಲಕ ಪತ್ರಕರ್ತರಿಗೆ ಕೊಡಮಾಡಿದ ಆಹಾರ ಕಿಟ್ ಗಳ ವಿತರಣಾ ಕಾರ್ಯಕ್ರಮ ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ನಡೆಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಕೋವಿಡ್ ಬಾದೆಯಿಂದ ಜಗತ್ತೇ ಈಗ ಸಂಕಷ್ಟದಲ್ಲಿರುವಾಗ ಪರಸ್ಪರ ಸಹಕಾರ ಮತ್ತು ಸಹಾಯ ಅತೀ ಅಗತ್ಯ. ಈ ನಿಟ್ಟಿನಲ್ಲಿ ಎಸ್ ಡಿಸಿಸಿ ಬ್ಯಾಂಕ್ ನ ಕಾರ್ಯ ಮಾದರಿಯಾಗಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು ಮಾತನಾಡಿ ಆಪತ್ತು ಕಾಲದಲ್ಲಿ ಅದನ್ನು ಎದುರಿಸಲು ಸರ್ಕಾರದ ಜೊತೆ ಕೈ ಜೋಡಿಸುವುದರ ಜೊತೆಗೆ ಸಮಾಜದ ಎಲ್ಲರಿಗೂ ಎಸ್ ಸಿ ಡಿಸಿಸಿ ಬ್ಯಾಂಕ್ ಸಹಾಯ ಹಸ್ತವನ್ನು ನೀಡುತಿದೆ. ಕೋವಿಡ್ ಮಹಾ ಮಾರಿಯನ್ನು ಎದುರಿಸುವಲ್ಲಿ ಮುಂಚೂಣಿಯಲ್ಲಿರುವ ಆಶಾ ಕಾರ್ಯಕರ್ತರು, ಪತ್ರಕರ್ತರು ಮತ್ತಿತರ ವಿಭಾಗಕ್ಕೆ ಪ್ರೋತ್ಸಾಹ ನೀಡಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್.ದೇವರಾಜ್ ಮಾತನಾಡಿ ಪ್ರಳಯ, ಪ್ರಕೃತಿ ವಿಕೋಪ, ಕೋವಿಡ್ ಹೀಗೆ ಯಾವುದೇ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುವ ಸಂದರ್ಭದಲ್ಲಿಯೂ ಎಸ್ ಸಿಡಿಸಿಸಿ ಬ್ಯಾಂಕ್ ಸಮಾಜಕ್ಕೆ ಸ್ಪಂದನೆ ನೀಡುತಿದೆ ಎಂದರು.
ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಬಿ.ಜಯರಾಮ ರೈ ಮಾತನಾಡಿ ಕೊರೋನಾ ವೈರಸ್ ಹರಡುವುದನ್ನು ತಡೆಯಲು ಜಾಗೃತಿ ಮೂಡಿಸಲು ಪತ್ರಕರ್ತರು ಪ್ರಮುಖ ಪಾತ್ರ ನಿರ್ವಹಿಸುತ್ತಾರೆ. ಪತ್ರಕರ್ತರಿಗೆ ಪ್ರೋತ್ಸಾಹ ನೀಡುವುದು ಎಲ್ಲರ ಕರ್ತವ್ಯ ಎಂದರು.
ಸುಳ್ಯ ತಾಲೂಕಿನಲ್ಲಿ ಕಾರ್ಯನಿರ್ವಹಿಸುವ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಮತ್ತು ಇತರ ಪತ್ರಕರ್ತರಿಗೆ ಆಹಾರ ಕಿಟ್ ಗಳನ್ನು ವಿತರಿಸಲಾಯಿತು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿ, ಹರೀಶ್ ಬಂಟ್ವಾಳ್ ವಂದಿಸಿದರು.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…