Advertisement

ಎ.20 ರಿಂದ ಅಂತಾರಾಜ್ಯ ಮಟ್ಟದ ಶ್ರೀ ಕೇಶವಕೃಪಾ ಉಚಿತ ವೇದ ಯೋಗ ಶಿಬಿರ

Share

ಸುಳ್ಯ: ಸುಳ್ಯ ಹಳೆಗೇಟಿನ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ ಒಂದು ತಿಂಗಳ ಕಾಲ ನಡೆಯುವ ಶ್ರೀ ಕೇಶವ ಕೃಪಾ ವೇದ-ಯೋಗ-ಕಲಾ ಶಿಬಿರ ಎ.21ರಿಂದ ಮೇ.21ರವರೆಗೆ ನಡೆಯಲಿದೆ.
ಯೋಗದ ಜೊತೆಗೆ, ಕಲಾ ಪ್ರಕಾರಗಳಾದ ಯಕ್ಷಗಾನ, ಕಂಸಾಳೆ, ಜಾದೂ, ಭಜನೆ, ಸಂಗೀತ, ಪೇಪರ್ ಕಟ್ಟಿಂಗ್, ಮಿಮಿಕ್ರಿ ಮೊದಲಾದ ಸೃಜನಶೀಲ ಕಲೆಗಳನ್ನು ಶಿಬಿರಾರ್ಥಿಗಳಿಗೆ ಪರಿಚಯಿಸುವುದರೊಂದಿಗೆ ಭಗವದ್ಗೀತೆ, ಲಲಿತಾ ಸಹಸ್ರನಾಮ, ವಿಷ್ಣು ಸಹಸ್ರನಾಮ ಮುಂತಾದ ಶ್ಲೋಕಗಳನ್ನು ಸ್ಫುಟವಾಗಿ ಪಠಿಸುವ ಸಾಂಪ್ರದಾಯಿಕ ವಿಧಾನ, ಸುಭಾಷಿತಗಳು, ಆದರ್ಶ ದಿನಚರಿ ರೂಪಿಸಿಕೊಳ್ಳುವ ಬಗೆ, ನೈತಿಕ ಶಿಕ್ಷಣ, ಮಾನವೀಯ ಮೌಲ್ಯಗಳು ಮುಂತಾದ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ವಿಚಾರಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಕಲಿಸಲಾಗುತ್ತದೆ. 30 ದಿನಗಳ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಸಂಪೂರ್ಣ ಉಚಿತವಾಗಿ ನಡೆಯುವ ಹತ್ತೊಂಭತ್ತನೇ ವರ್ಷದ ವೇದ-ಯೋಗ-ಕಲಾ ಶಿಬಿರದಲ್ಲಿ ರಾಜ್ಯ ಹಾಗೂ ಹೊರರಾಜ್ಯದ ಆಯ್ಕೆಯಾದ 120 ಶಿಬಿರಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಅಶನ, ವಸನ, ವಸತಿ, ಪಠ್ಯಪುಸ್ತಕಗಳು, ವ್ಯಾಸಪೀಠ ಇತ್ಯಾದಿಗಳನ್ನು ನೀಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ತಿಳಿಸಿದ್ದಾರೆ.
ಶ್ರೀ ಕೇಶವಕಿರಣ ಛಾತ್ರಾ ನಿವಾಸ ನಿರ್ಮಾಣ ಸಮಿತಿಯ ಅಧ್ಯಕ್ಷ ಶಂಕರ ಭಟ್ ಕೆ. ಪುತ್ತೂರು ಶಿಬಿರವನ್ನು ಉದ್ಘಾಟಿಸುವರು. ಶಿಕ್ಷಣ ಇಲಾಖೆಯ ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಶ್ರೀ ಎಂ.ಎಸ್. ನಾಗರಾಜ ರಾವ್ ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಾಗರದ ಗಜಾನನ ಸಂಸ್ಕೃತ ಪಾಠಶಾಲೆಯ ಉಪನ್ಯಾಸಕ ವಿದ್ವಾನ್ ಗಜಾನನ ಭಟ್ಟ ರೇವಣಕಟ್ಟ ದಿಕ್ಸೂಚಿ ಉಪನ್ಯಾಸ ಮಾಡಲಿದ್ದು, ನಿವೃತ್ತ ಶಿಕ್ಷಕಿ ಗಂಗಮ್ಮ ಕೋಲ್ಚಾರ್ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

4 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

9 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

13 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

17 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago