ಎ.24 ಹಾಗೂ 27 | ಪ್ರಧಾನಿ ನರೇಂದ್ರ ಮೋದಿ ಅವರಿಂದ ವೀಡಿಯೋ ಕಾನ್ಫರೆನ್ಸ್

April 23, 2020
1:15 PM

ನವದೆಹಲಿ: ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ  ಗ್ರಾಮಮಟ್ಟದಿಂದ ಅಭಿಪ್ರಾಯ ಪಡೆಯಲು ಹಾಗೂ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಎ. 24ರಂದು ದೇಶದ ವಿವಿಧ ಗ್ರಾಮ ಪಂಚಾಯತ್ ಗಳನ್ನು ಉದ್ದೇಶಿಸಿ ಭಾಷಣ ಹಾಗೂ ವಿವಿಧ ಗ್ರಾಮ ಪಂಚಾಯತ್ ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಲಿದ್ದಾರೆ.  ಎ.27 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.

ರಾಷ್ಟ್ರೀಯ ಪಂಚಾಯತ್ ರಾಜ್‌ ದಿನವಾಗಿರುವ ಎ. 24ರಂದು ವಿವಿಧ ಗ್ರಾಮ  ಪಂಚಾಯತ್ ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಲಿದ್ದಾರೆ ಎಂದು ಪಂಚಾಯತ್ ರಾಜ್ ಸಚಿವಾಲಯ ತಿಳಿಸಿದೆ. ಇದೇ ವೇಳೆ  ಪ್ರಧಾನಿ ನರೇಂದ್ರ ಮೋದಿ ಏಕೀಕೃತ ಇ-ಗ್ರಾಮ್ ಸ್ವರಾಜ್ ಪೋರ್ಟಲ್ ಮತ್ತು ಮೊಬೈಲ್ ಆ್ಯಪ್‌ಗೆ ಚಾಲನೆ ನೀಡಲಿದ್ದಾರೆ. ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಯೋಜನೆಗಳನ್ನು ತಯಾರಿಸಲು ಮತ್ತು ಕಾರ್ಯಗತಗೊಳಿಸಲು ಈ ಪೋರ್ಟಲ್ ಸಹಕಾರಿಯಾಗಲಿದೆ.

ಎ.27 ರಂದು ಇನ್ನೊಂದು ವಿಡಿಯೋ ಕಾನ್ಫರೆನ್ಸ್ : ಮೇ.3 ರಂದು ಎರಡನೇ ಹಂತದ ಲಾಕ್ಡೌನ್ ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಲಾಕ್ಡೌನ್ ಕೊನೆಯ ವಾರ ನಿರ್ಣಾಯಕವಾಗಿರುವುದರಿಂದ ಎ.27 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.ಆಯಾ ಸರ್ಕಾರಗಳ ಮುಖ್ಯಮಂತ್ರಿಗಳೊಂದಿಗೆ  ವಿಡಿಯೋ ಸಂವಾದ ನಡೆಸಲಿರುವ ಪ್ರಧಾನಿ ಮೋದಿಯವರು ರಾಜ್ಯಗಳ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24-09-2026 | ಸೆ.29ರಿಂದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ
September 24, 2026
1:40 PM
by: ಸಾಯಿಶೇಖರ್ ಕರಿಕಳ
ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror