ಬೆಂಗಳೂರು: ಕೊರೊನಾ ವೈರಸ್ ಹರಡುವುದು ತಡೆಯಲು ಹಾಗೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಎ.30 ರವರೆಗೆ ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಣೆ ಅನಿವಾರ್ಯವಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
Advertisement
ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು,
ಪ್ರಧಾನಮಂತ್ರಿಗಳು ಕೊರೋನಾ ಸೋಂಕು ಸಮುದಾಯಕ್ಕೆ ಹರಡದಂತೆ ಎಚ್ಚರ ವಹಿಸಲು ಸೂಚಿಸಿದ್ದಾರೆ. ಹೀಗಾಗಿ ರಾಜ್ಯದಲ್ಲೂ ಲಾಕ್ಡೌನ್ ಮುಂದುವರಿಸುವ ಬಗ್ಗೆ ತಿಳಿಸಲಾಗಿದೆ ಎಂದರು. ಈ ಬಾರಿ ಕೃಷಿ, ಕೈಗಾರಿಕೆ, ಕಾರ್ಮಿಕರಿಗೆ ಉದ್ಯೋಗಕ್ಕೆ ಅನುಕೂಲ ಕಲ್ಪಿಸುವ ಜೊತೆಗೆ ಸರಕಾರಿ ಕಚೇರಿಗಳನ್ನು ಭಾಗಶಃ ಆರಂಭಿಸಲು ಅನುಮತಿ ನೀಡಲಾಗುವುದು ಎಂದರು.
ಎ. 10 ರಿಂದ ಮೀನುಗಾರಿಕೆ, ಮೀನು ಸಂಸ್ಕರಣಕ್ಕೆ ಲಾಕ್ ಡೌನ್ ನಿಂದ ವಿನಾಯ್ತಿ ನೀಡಲಾಗಿದೆ ಎಂದು ಪ್ರಧಾನಿಗಳು ತಿಳಿಸಿದ್ದು, ಇದರಿಂದ ಕರಾವಳಿಯಲ್ಲಿ ಮೀನುಗಾರಿಕೆಗೆ ಸಹಕಾರಿಯಾಗಲಿದೆ ಎಂದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement