ಮಂಗಳೂರು: ಕ್ಯಾಂಪ್ಕೋ ವತಿಯಿಂದ ಏ.9 ರಿಂದ ಕೊಕ್ಕೋ ಖರೀದಿ ಆರಂಭವಾಗಲಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ.
ಏ.9 ರಿಂದ ಪ್ರತೀ ಗುರುವಾರ ಸುಳ್ಯ, ವಿಟ್ಲ, ಅಡ್ಯನಡ್ಕ, ಕಡಬ ದ ಕ್ಯಾಂಪ್ಕೋ ಶಾಖೆಗಳಲ್ಲಿ ಕೊಕ್ಕೋ ಖರೀದಿ.
ಏ.10 ರಿಂದ ಪ್ರತೀ ಶುಕ್ರವಾರ ಪುತ್ತೂರು ಶಾಖೆಯಲ್ಲಿ ಕೊಕ್ಕೋ ಖರೀದಿ ,
ಏ.13 ರಿಂದ ಪ್ರತೀ ಸೋಮವಾರ ಬೆಳ್ತಂಗಡಿ ಶಾಖೆಯಲ್ಲಿ ಕೊಕ್ಕೋ ಖರೀದಿ ಮಾಡಲಾಗುತ್ತದೆ.
ಬೆಳಗ್ಗೆ 9 ರಿಂದ 12 ಗಂಟೆಯವರೆಗೆ ಕೊಕ್ಕೋ ಖರೀದಿ ನಡೆಯುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ. ಲಾಕ್ಡೌನ್ ಸಂದರ್ಭ ಕೃಷಿ ವಸ್ತು ಮಾರಾಟಕ್ಕೆ ಬರುವ ಹಿನ್ನೆಲೆಯಲ್ಲಿ ಕ್ಯಾಂಪ್ಕೋ ಐಡಿ ಕಾರ್ಡ್ ಅಥವಾ ಆರ್ ಟಿ ಸಿ ಜೊತೆ ಬರಬೇಕಾಗಿದೆ. ಮುಂದಿನ ದಿನಗಳಲ್ಲಿ ಕೊಕ್ಕೋ ಖರೀದಿ ಅವಧಿ ವಿಸ್ತರಣೆ, ಇತರ ಕಡೆಗಳಲ್ಲೂ ಖರೀದಿ ನಡೆಸಬೇಕೇ ಎಂಬುದರ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ.
ಜಿಲ್ಲೆಯ ರೈತರ ಹಿತಕ್ಕಾಗಿ ಸಂಸದ ನಳಿನ್ ಕುಮಾರ್ ಕಟೀಲು , ಜಿಲ್ಲೆಯ ಎಲ್ಲಾ ಶಾಸಕರ ಪ್ರಯತ್ನ ಹಾಗೂ ಜಿಲ್ಲಾಡಳಿತವು ಕೊಕ್ಕೋ ಖರೀದಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಇದಕ್ಕಾಗಿ ಕ್ಯಾಂಪ್ಕೋ ಹಾಗೂ ರೈತರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಸತೀಶ್ಚಂದ್ರ ತಿಳಿಸಿದ್ದಾರೆ.
ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…
ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…