ಏರುತ್ತಿರುವ ಈರುಳ್ಳಿ ದರ : ಈಗ ಹೆಚ್ಚು ಕಣ್ಣೀರು ತರಿಸುತ್ತಿದೆ ಈರುಳ್ಳಿ…!

November 6, 2019
7:12 AM

ಸುಳ್ಯ: ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಏರುತ್ತಿದೆ. ಸುಳ್ಯ ನಗರದಲ್ಲಿ ಕೆಜಿಯೊಂದಕ್ಕೆ 50-60 ರೂಗಳಿಗೆ ಈರುಳ್ಳಿ ಮಾರಾಟ ಆಗುತ್ತಿದೆ. ಒಂದು ವಾರದ ಅವಧಿಯಲ್ಲಿ ಈರುಳ್ಳಿ ಬೆಲೆ ಸುಳ್ಯದಲ್ಲಿ 15-20 ರೂ ಏರಿದೆ. 40-45 ರೂ ಆಸುಪಾಸಿನಲ್ಲಿದ್ದ ಈರುಳ್ಳಿ ಬೆಲೆ 60 ರವರೆಗೆ ತಲುಪಿದೆ. ಅಲ್ಲದೆ ಈರುಳ್ಳಿಯ ಲಭ್ಯತೆಯೂ ಕಡಿಮೆಯಾಗಿದೆ ಎನ್ನುತ್ತಾರೆ ವ್ಯಾಪಾರಸ್ಥರು.

ಕೆಲ ದಿನಗಳಿಂದ ಇಳಿಮುಖವಾಗಿದ್ದ ಈರುಳ್ಳಿ ಬೆಲೆ ಮತ್ತೆ ಏರುತ್ತಿ ದೆ. ಕೆಲವು ರಾಜ್ಯಗಳಲ್ಲಿ ಕೆಜಿಗೆ 90 ರಿಂದ 100 ರೂಪಾಯಿಯಂತೆ ಮಾರಾಟ ಮಾಡಲಾಗುತ್ತಿದೆ ಎಂಬ ವರದಿಗಳಿವೆ.
ಆಗಸ್ಟ್​ ಮತ್ತು ಸೆಪ್ಟೆಂಬರ್​ ತಿಂಗಳಲ್ಲಿ ಕೆಜಿಗೆ 80 ರೂ.ನಂತೆ ಮಾರಾಟವಾಗಿದ್ದ ಈರುಳ್ಳಿ ಬೆಲೆ ಅಕ್ಟೋಬರ್​ನಲ್ಲಿ ತಕ್ಕಮಟ್ಟಿಗೆ ಕಡಿಮೆಯಾಗಿತ್ತು. ಆದರೆ, ಈರುಳ್ಳಿ ಹೆಚ್ಚಾಗಿ ಬೆಳೆಯುವ ಮಹಾರಾಷ್ಟ್ರದಲ್ಲಿ ಅತಿವೃಷ್ಟಿ ಆಗಿರುವ ಹಿನ್ನೆಲೆಯಲ್ಲಿ ಈರುಳ್ಳಿ ಬೆಲೆ ಹೆಚ್ಚಳವಾಗಿದೆ ಎನ್ನಲಾಗುತ್ತಿದೆ . ನವೆಂಬರ್​ನಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ ಕೂಡ ಈರುಳ್ಳಿ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇದರಿಂದಾಗಿ ಈರುಳ್ಳಿಯ ಬೆಲೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತರಕಾರಿ ವ್ಯಾಪಾರಸ್ಥರು ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್
September 27, 2026
8:12 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ
September 26, 2026
7:10 PM
by: ದ ರೂರಲ್ ಮಿರರ್.ಕಾಂ
ಜಿಐ ಮಾನ್ಯತೆಯ ‘ಗುಲ್ಬರ್ಗಾ ತೊಗರಿ ಬೇಳೆ’ಗೆ ಮಾಲ್ಡೀವ್ಸ್‌ ಮಾರುಕಟ್ಟೆ – ರಫ್ತಿಗೆ ಕೇಂದ್ರದ ಅನುಮತಿ
September 26, 2026
9:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror