ಏ21ರಿಂದ ಅಂತಾರಾಜ್ಯ ಮಟ್ಟದ ಶ್ರೀ ಕೇಶವಕೃಪಾ ಉಚಿತ ವೇದ ಯೋಗ ಶಿಬಿರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸುಳ್ಯ ಹಳೆಗೇಟಿನ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ವತಿಯಿಂದ ಒಂದು ತಿಂಗಳ ಕಾಲ ನಡೆಯುವ ಶ್ರೀ ಕೇಶವ ಕೃಪಾ ವೇದ-ಯೋಗ-ಕಲಾ ಶಿಬಿರ ಏ.21ರಿಂದ ಮೇ.21ರವರೆಗೆ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯೋಗದ ಜೊತೆಗೆ, ಕಲಾ ಪ್ರಕಾರಗಳಾದ ಯಕ್ಷಗಾನ, ಕಂಸಾಳೆ, ಜಾದೂ, ಭಜನೆ, ಸಂಗೀತ, ಪೇಪರ್ ಕಟ್ಟಿಂಗ್, ಮಿಮಿಕ್ರಿ ಮೊದಲಾದ ಸೃಜನಶೀಲ ಕಲೆಗಳನ್ನು ಶಿಬಿರಾರ್ಥಿಗಳಿಗೆ ಪರಿಚಯಿಸುವುದರೊಂದಿಗೆ ಹಿಂದೂ ಧರ್ಮದ ನಂಬಿಕೆಗಳು ಮತ್ತು ಆಚರಣೆಗಳ ಹಿಂದಿರುವ ವೈಜ್ಞಾನಿಕ ಕಾರಣಗಳು, ಭಗವದ್ಗೀತೆ, ಲಲಿತಾ ಸಹಸ್ರನಾಮ, ವಿಷ್ಣು ಸಹಸ್ರನಾಮ ಮುಂತಾದ ಶ್ಲೋಕಗಳನ್ನು ಸ್ಫುಟವಾಗಿ ಪಠಿಸುವ ಸಾಂಪ್ರದಾಯಿಕ ವಿಧಾನ, ಸುಭಾಷಿತಗಳು, ಆದರ್ಶ ದಿನಚರಿ ರೂಪಿಸಿಕೊಳ್ಳುವ ಬಗೆ, ನೈತಿಕ ಶಿಕ್ಷಣ, ಮಾನವೀಯ ಮೌಲ್ಯಗಳು ಮುಂತಾದ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ವಿಚಾರಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಕಲಿಸಲಾಗುತ್ತದೆ. 30 ದಿನಗಳ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ಸಂಪೂರ್ಣ ಉಚಿತವಾಗಿ ನಡೆಯುವ ಹತ್ತೊಂಭತ್ತನೇ ವರ್ಷದ ವೇದ-ಯೋಗ-ಕಲಾ ಶಿಬಿರದಲ್ಲಿ ರಾಜ್ಯ ಹಾಗೂ ಹೊರರಾಜ್ಯದ ಆಯ್ಕೆಯಾದ 120 ಶಿಬಿರಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಅಶನ, ವಸನ, ವಸತಿ, ಪಠ್ಯಪುಸ್ತಕಗಳು, ವ್ಯಾಸಪೀಠ ಇತ್ಯಾದಿಗಳನ್ನು ನೀಡಲಾಗುವುದು ಎಂದರು.

Advertisement

ಉದ್ಘಾಟನಾ ಕಾರ್ಯಕ್ರಮ:
ಏ.21ರಂದು ಪೂ.10.30ಕ್ಕೆ ಶ್ರೀ ಕೇಶವಕಿರಣ ಛಾತ್ರಾ ನಿವಾಸ ನಿರ್ಮಾಣ ಸಮಿತಿಯ ಅಧ್ಯಕ್ಷ ಶಂಕರ ಭಟ್ ಕೆ. ಶಿಬಿರವನ್ನು ಉದ್ಘಾಟಿಸುವರು. ಶಿಕ್ಷಣ ಇಲಾಖೆಯ ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ ಶ್ರೀ ಎಂ.ಎಸ್. ನಾಗರಾಜ ರಾವ್ ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಾಗರದ ಗಜಾನನ ಸಂಸ್ಕೃತ ಪಾಠಶಾಲೆಯ ಉಪನ್ಯಾಸಕ ವಿದ್ವಾನ್ ಗಜಾನನ ಭಟ್ಟ ರೇವಣಕಟ್ಟ ದಿಕ್ಸೂಚಿ ಉಪನ್ಯಾಸ ಮಾಡಲಿದ್ದು, ನಿವೃತ್ತ ಶಿಕ್ಷಕಿ ಗಂಗಮ್ಮ ಕೋಲ್ಚಾರ್ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಭಟ್ ವಗೆನಾಡು ಉಪಸ್ಥಿತರಿರುವರು ಎಂದು ಅವರು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಪ್ರತಿಷ್ಠಾನದ ವೇದ ಅಧ್ಯಾಪಕ ಸುದರ್ಶನ ಭಟ್ ಉಜಿರೆ, ಶಂಕರ ಭಟ್ ಪುತ್ತೂರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…

3 hours ago

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

3 hours ago

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

10 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

11 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

19 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

21 hours ago