ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಗಾಂಧಿ ಮೈದಾನದ ಭವ್ಯ ಕಲಾ ಸಂಭ್ರಮ ವೇದಿಕೆಯಲ್ಲಿ ವರ್ಣರಂಜಿತ ಚಾಲನೆಯನ್ನು ನೀಡಲಾಯಿತು.
ಮಂಜು ಮಳೆಯ ನಡುವೆ, ಉತ್ಸಾಹಿ ಪ್ರೇಕ್ಷಕರ ಸಮ್ಮುಖದಲ್ಲಿ ನಡುವೆ ವಿಜಯದಶಮಿಯವರೆಗೆ ಆಯೋಜಿತವಾಗಿರುವ ಅತ್ಯಾಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರ್ವಿಘ್ನವಾಗಿ ನಡೆಯಲೆಂದು ಪ್ರಾರ್ಥಿಸುವ ಮೂಲಕ, ಶಕ್ತಿ ದೇವತೆಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.
ಜ್ಯೋತಿ ಬೆಳಗಿ, ಬ್ಯಾಂಡ್ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿ, ಮಡಿಕೇರಿ ದಸರಾ ಉತ್ಸವಾಚರಣೆಯಲ್ಲಿ ದಸರಾ ಸಮಿತಿಯ ಆಡಳಿತಾಧಿಕಾರಿಯಾಗಿ ಪಾಲ್ಗೊಳ್ಳಲು ಅವಕಾಶ ದೊರಕಿರುವುದು ಹೆಮ್ಮೆಯ ವಿಚಾರವೆಂದು ತಿಳಿಸಿ, ಉತ್ಸವದ ಯಶಸ್ವಿ ಆಯೋಜನೆಗೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದೆ. ಉತ್ಸವದಲ್ಲಿ ಜಿಲ್ಲೆ ಮತ್ತು ಹೊರ ಜಿಲ್ಲೆಯವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಎಸ್‍ಪಿ ಡಾ. ಸುಮನ್ ಡಿ. ಪನ್ನೇಕರ್ ಮಾತನಾಡಿ, ಹತ್ತು ದಿನಗಳ ಅವಧಿಯ ಉತ್ಸವ ಯಶಸ್ವಿಯಾಗಿ ನಡೆಯಲೆಂದು ಹಾರೈಸಿದರೆ, ಎಡಿಸಿ ಸ್ನೇಹ, ಸಿಇಒ ಲಕ್ಷ್ಮೀಪ್ರಿಯ ಸಾಂಸ್ಕೃತಿಕ ಕಾರ್ಯಕ್ರಗಳೊಂದಿಗೆ ಉತ್ಸವ ಯಶಸ್ವಿಯಾಗಿ ನಡೆಯಲೆಂದು ಶುಭ ಹಾರೈಸಿದರು. ದಸರಾ ಸಮಿತಿಯ ಗೌರವ ಕಾರ್ಯದರ್ಶಿ ಎಂ.ಎಲ್. ರಮೇಶ್ ಮಾತನಾಡಿ, ದಸರಾ ಉತ್ಸವದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಕಲಾವಿದರಿಗೆ ಪ್ರೋತ್ಸಾಹ ನೀಡುವ ಉದ್ದೇಶವೂ ಅಡಗಿದೆಯೆಂದು ತಿಳಿಸಿ ಉತ್ಸವದ ಯಶಸ್ಸಿಗೆ ಶುಭ ಹಾರೈಸಿದರು.
ಅಧ್ಯಕ್ಷರಾದ ರಾಬಿನ್ ದೇವಯ್ಯ, ಕೊಡಗಿನಲ್ಲಿ ಯಾವುದೇ ಕಾರ್ಯಕ್ರಗಳ ಆಯೋಜನೆಗೆ ಮಳೆ ಸೇರಿದಂತೆ ಮೊದಲಾದ ಅಡ್ಡಿ ಆತಂಕಗಳ ನಡುವೆ ಕಾರ್ಯನಿರ್ವಹಿಸಬೇಕಾಗುತ್ತದೆ. ಆದರೆ ಜಿಲ್ಲೆಯ ಜನತೆ ಮಳೆ ಬಂದರೂ, ಪ್ರಕೃತಿ ಮುನಿಸಿಕೊಂಡರು ಎದೆಗುಂದದೆ ಕೆಲಸ ನಿರ್ವಹಿಸಿಕೊಂಡು ಬರುತ್ತಿದ್ದಾರೆಂದು ಮೆಚ್ಚುಗೆಯ ನುಡಿಗಳನ್ನಾಡಿದರು. ಮೈಸೂರು ದಸರಾ ಸರ್ಕಾರದ ಮೂಲಕ ನಡೆಯುವ ಉತ್ಸವವಾಗಿದ್ದರೆ, ಮಡಿಕೇರಿ ದಸರಾ ಉತ್ಸವದಲ್ಲಿ ಜಿಲ್ಲಾಡಳಿತ ಮತ್ತು ದಸರಾ ಸಮಿತಿ ಒಂದಾಗಿ ಭಿನ್ನಾಭಿಪ್ರಾಯಗಳಿಗೆ ಅವಕಾಶ ಇಲ್ಲದೆ ಕಾರ್ಯನಿರ್ವಹಿಸುವುದು ವಿಶೇಷವೆಂದು ತಿಳಿಸಿದರು.
ಈ ಬಾರಿಯ ದಸರಾ ಸಾಂಸ್ಕೃತಿಕ ಕಾರ್ಯಕ್ರಗಳ ಜೊತೆಗೆ ಅ. 2 ರಂದು ಮಕ್ಕಳ ದಸರಾ, 4 ಕ್ಕೆ ಕವಿಗೋಷ್ಠಿ, 5 ರಂದು ಯುವ ದಸರಾ , ಅ.6 ರಂದು ಮಹಿಳಾ ದಸರಾ ಆಯೋಜಿತವಾಗಿದೆ. ಅ.7 ರಂದು ಆಯುಧ ಪೂಜೆಯೊಂದಿಗೆ ಅಲಂಕೃತ ವಾಹನಗಳ ಸ್ಪರ್ಧಾ ಕಾರ್ಯಕ್ರಮ ನಡೆಯಲಿದ್ದು, ಅ.8 ರಂದು ವಿಜಯದಶಮಿಯ ಶೋಭಾಯಾತ್ರೆ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳ ಯಶಸ್ವಿ ಆಯೋಜನೆಗೆ ಜಿಲ್ಲಾಡಳಿತ ಪೂರಕ ಸಹಕಾರವನ್ನು ನೀಡುತ್ತಿರುವ ಬಗ್ಗೆ ಮೆಚ್ಚುಗೆಯ ನುಡಿಗಳಾಡಿದರು.
ವೇದಿಕೆಯಲ್ಲಿ ದಸರಾ ಸಮಿತಿ ಪದಾಧಿಕಾರಿಗಳು, ವಿವಿಧ ದಸರಾ ಉಪ ಸಮಿತಿಗಳ ಪ್ರಮುಖರು ಉಪಸ್ಥಿತರಿದ್ದರು. ಸಜಿತ ಗಂಗಮ್ಮ ಪ್ರಾರ್ಥಿಸಿ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಆರ್.ಬಿ ರವಿ ಸ್ವಾಗತಿಸಿದರು. ಅನಿಲ್ ಹೆಚ್.ಟಿ. ಕಾರ್ಯಕ್ರಮ ನಿರೂಪಿಸಿದರು. ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ. ಕೆ. ಜಗದೀಶ್ ವಂದಿಸಿದರು.
ಮಾನಸಿಕ ವಿಕಲಚೇತನರಾಗಿ ಉಡುಪಿಯಲ್ಲಿ ರಸ್ತೆ ಬದಿ ತಿರುಗಾಡುತ್ತಿದ್ದ ಬಿಹಾರದ ರಮಾದೇವಿ ಅವರು ವರ್ಷದ…
ಮಣ್ಣಿನಲ್ಲಿ ಬಿದ್ದ ಬೀಜವು ಜೀವಂತಿಕೆಯಿಂದ ತನ್ನ ಬೇರುಗಳನ್ನು ಸಿಕ್ಕಿದ ಬಿರುಕುಗಳಲ್ಲಿ ಹಬ್ಬಿಸುತ್ತ ತೆವಳುತ್ತ…
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ…
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …