ಸುಳ್ಯ:ಐವರ್ನಾಡು ಯುವಶಕ್ತಿ ಸಂಘದ ವತಿಯಿಂದ ಐವರ್ನಾಡು ಸ.ಹಿ.ಪ್ರಾ.ಶಾಲೆಯ ಮಡ್ತಿಲ ಪುರುಷೋತ್ತಮ ಗೌಡ ಸ್ಮಾರಕ ರಂಗಮಂದಿರದಲ್ಲಿ ಶ್ರೀ ಶಾರದಾ ಪೂಜಾ ಮಹೋತ್ಸವ ನಡೆಯಿತು.
ಶನಿವಾರ ಬೆಳಗ್ಗೆ ಪುತ್ತಿಲ ಗಿರೀಶ್ ಅಸ್ರಣ್ಣ ಅವರ ನೇತೃತ್ವದಲ್ಲಿ ಗಣಪತಿ ಹೋಮ ಮತ್ತು ಶ್ರೀ ಶಾರದಾ ದೇವಿಯ ಪ್ರತಿಷ್ಟಾಪನೆ ನಡೆಯಿತು. ನಂತರ ನಂತರ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಭಾಕಾರ್ಯಕ್ರಮ ನಡೆಯಿತು.
ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಐವರ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ ವಹಿಸಿದ್ದರು. ಅತಿಥಿಗಳಾಗಿ ಸುಳ್ಯ ವರ್ತಕ ಸಂಘದ ಅಧ್ಯಕ್ಷ ಪಿ,ಬಿ.ಸುಧಾಕರ ರೈ ಭಾಗವಹಿಸಿದ್ದರು. ಚಿದಾನಂದ ಯು.ಎಸ್.ಗೂನಡ್ಕ ಧಾರ್ಮಿಕ ಉಪನ್ಯಾಸ ನೀಡಿದರು.ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಗಿರಿಜಮ್ಮ, ಎಸ್.ಡಿ.ಎಂ.ಸಿ.ಅಧ್ಯಕ್ಷ ನಾಗಪ್ಪ ಗೌಡ ಪಾಲೆಪ್ಪಾಡಿ,ಯುವಶಕ್ತಿ ಸಂಘದ ಅಧ್ಯಕ್ಷ ಜಗದೀಶ ಉದ್ದಂಪಾಡಿ,ಪ್ರಧಾನ ಕಾರ್ಯದರ್ಶಿ ಲೋಕೇಶ್ ಪರ್ಲಿಕಜೆ ಉಪಸ್ಥಿತರಿದ್ದರು. ಇದೇ ವೇಳೆ ನಿವೃತ್ತ ಮುಖ್ಯೋಪಾಧ್ಯಾಯ ಶಾಂತರಾಮ ಕೆ.ಎಸ್. ಅವರನ್ನು ಶಾಲು ಹೊದಿಸಿ,ಫಲ ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಯುವಶಕ್ತಿ ಸಂಘದ ಗೌರವಾಧ್ಯಕ್ಷ ದಿನೇಶ್ ಮಡ್ತಿಲ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂಚಲಾಕ್ಷಿ ಕತ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಜಗದೀಶ ಉದ್ದಂಪಾಡಿ ವಂದಿಸಿದರು.ಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ವಿಜೇತರ ಪಟ್ಟಿಯನ್ನು ವಿನಯ ಕೋಂದ್ರಮಜಲು ವಾಚಿಸಿದರು.
ಭಾನುವಾರ ಬೆಳಗ್ಗೆ ಯುವಶಕ್ತಿ ಸಂಘದ ಸದಸ್ಯರಿಂದ ಮತ್ತು ಶಾಲಾ ಮಕ್ಕಳಿಂದ ಭಜನಾ ಕಾರ್ಯಕ್ರಮ , ಅಕ್ಷರಾಭ್ಯಾಸ ನಡೆದು ಸಂಜೆ ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆ ಐವರ್ನಾಡಿನ ಮುಖ್ಯ ರಸ್ತೆಯಲ್ಲಿ ನಡೆದು ಜಲಸ್ತಂಭನ ನಡೆಯಿತು.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…