ಸುಳ್ಯ: ಐವರ್ನಾಡು ಗ್ರಾಮ ಪಂಚಾಯತ್ ನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯ ಕ್ರಮವು ಜೂ.26 ರಂದು ನಡೆಯಿತು.
ಶಾಸಕ ಎಸ್.ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಚೈತ್ರ ಕಟ್ಟತ್ತಾರು ವಹಿಸಿದ್ದರು. ಗ್ರಾಮ ವಿಕಾಸ ಮಿನಿಸಭಾಭವನ ವಿಕಾಸ ಭವನವನ್ನು ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ ಉದ್ಘಾಟಿಸಿದರು. ಶಾಸಕ ಎಸ್.ಅಂಗಾರ ನಾಮಫಲಕ ಅನಾವರಣಗೊಳಿಸಿದರು. ಘನತ್ಯಾಜ್ಯ ಘಟಕವನ್ನು ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ, ಕಾಂಕ್ರೀಟೀಕರಣ ರಸ್ತೆಯನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಸ್ಮಶಾನ ಕಟ್ಟಡವನ್ನು ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೊಳ್ಳೂರು, ಸ್ಮಶಾನ ಘಟಕಕ್ಕೆ ನೀರು ಸರಬರಾಜು ಯೋಜನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಚೈತ್ರಾ ಕಟ್ಟತ್ತಾರು, ಸ್ವಚ್ಛಭಾರತ್ ಮಿಷನ್ ಸಾರ್ವಜನಿಕ ಶೌಚಾಲಯ ಕಟ್ಟಡವನ್ನು ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ ಉದ್ಘಾಟಿಸಿದರು.
ವೇದಿಕೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್., ಪಂಚಾಯಿತಿರಾಜ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹನುಮಂತರಾಯಪ್ಪ, ಸಹಕಾರಿ ಸಂಘದ ಉಪಾಧ್ಯಕ್ಷ ವಿಕ್ರಂ ಪೈ, ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ.,ಇಂಜಿನಿಯರ್ ಎಸ್.ಎಸ್.ಹುಕ್ಕೇರಿ,ಗ್ರಾಮ ಪಂಚಾಯತ್ ಸದಸ್ಯರು ,ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ಉಪಸ್ಥಿತರಿದ್ದರು.
ಗ್ರಾ.ಪಂ.ಸದಸ್ಯ ಶಾಂತಾರಾಮ ಕಣಿಲೆಗುಂಡಿ ಸ್ವಾಗತಿಸಿ, ಉಪಾಧ್ಯಕ್ಷ ಬಾಲಕೃಷ್ಣ ಕೀಲಾಡಿ ಪ್ರಾಸ್ತಾವಿಕ ಮಾತನಾಡಿದರು.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…