ವಿಟ್ಲ: ಮನೆ ಮನೆಗಳಲ್ಲಿ ತುಳು ಭಾಷೆ ಮಾತನಾಡುವ ಮೂಲಕ ತುಳು ಮಾತೆಯ ಉತ್ಸವ ನಡೆಯಬೇಕು. ತುಳುವರಲ್ಲಿ ಎದ್ದೇಳುವ ಪ್ರವೃತ್ತಿಯ ಕೊರತೆ ಇದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.
ಅವರು ಸೋಮವಾರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ವತಿಯಿಂದ ನಡೆಯುತ್ತಿರುವ ಶ್ರೀ ಒಡಿಯೂರು ರಥೋತ್ಸವ- ತುಳುನಾಡ ಜಾತ್ರೆ ಪ್ರಯುಕ್ತ ನಡೆದ ಇಪ್ಪತ್ತನೇ ತುಳು ಸಾಹಿತ್ಯ ಸಮ್ಮೇಳನೊವನ್ನು ಉದ್ಘಾಟಿಸಿ, ಆಶೀರ್ವಚನ ನೀಡಿದರು. ವಿಶ್ವವಿದ್ಯಾಲಯಗಳಲ್ಲಿ ತುಳು ಭಾಷೆಗೆ ಮಾನ್ಯತೆ ತುಳು ಭವಿಷ್ಯದ ದೃಷ್ಟಿಯಲ್ಲಿ ಒಳ್ಳೆಯ ಕಾರ್ಯವಾಗಿದೆ. ತುಳು ಕಾರ್ಯಕ್ಕೆ ಇಳಿದಾಗ ಮಾತ್ರ ನಮ್ಮ ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರಲು ಸಾಧ್ಯ. ಆನಂದದ ಮೂಲ ತ್ಯಾಗದಲ್ಲಿದೆ. ತ್ಯಾಗದಲ್ಲಿ ಮಾತ್ರ ಆನಂದದ ಅನುಭವವಿದೆ. ತುಳುವರಲ್ಲಿ ಹೃದಯ ಸಿರಿವಂತಿಕೆ ಇದೆ ಎಂದರು.
ಸಮ್ಮೇಳನಾಧ್ಯಕ್ಷತೆ ವಹಿಸಿದ್ದ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಎ ಸುಬ್ಬಣ್ಣ ರೈ ಮಾತನಾಡಿ ರಾಜ್ಯದಲ್ಲಿ ಕನ್ನಡ ಬಳಕೆಯ ಮಧ್ಯೆ ತುಳುವನ್ನು ಸುಭದ್ರವಾಗಿಸುವುದು. ಸವಾಲಿನ ಕಾರ್ಯ. ತುಳು ಭಾಷೆ ಒಳ ಮಗ್ಗುಲಿಗಳ ಬಗ್ಗೆ ಆಳವಾದ ಅಧ್ಯಯನ ನಡೆಯಬೇಕು. ತುಳು ಭಾಷೆ ಸಂಸ್ಕೃತಿ ವಿಚಾರದ ಬಗ್ಗೆ ಪ್ರತಿಯೊಬ್ಬರು ಅಭಿಮಾನ ಇಡಬೇಕು ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಡಾ. ಪಿ.ಎಸ್ ಎಡಪಡಿತ್ತಾಯ ಮಾತನಾಡಿ ಕಲೆ ಸಾಹಿತ್ಯಕ್ಕೆ ಬೆಂಬಲ ನೀಡುವ ಸಂತರಾಗಿದ್ದಾರೆ. ತುಳು ತೇರು ಎಳೆಯಲು ನಾವೆಲ್ಲರೂ ಕೈಜೋಡಿಸಬೇಕು. ತುಳು ಭಾಷೆ ಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಪ್ರತಿಯೊಬ್ಬ ತುಳುವರು ಪ್ರಯತ್ನಿಸಬೇಕು ಎಂದರು
ಮಲಾರ್ ಜಯರಾಮ ರೈ ಅವರ ಸಂಪದಕತ್ವದಲ್ಲಿ ರಚಿಸಲಾದ ಅವಧೂತ ಪಜ್ಜೆಲು ಪುಸ್ತಕ ಬಿಡುಗಡೆಗೊಳಿಸಲಾಯಿತು. ಬೆಳಿಗ್ಗೆ ಸಂಸ್ಥಾನದಿಂದ ಸಭಾ ವೇದಿಕೆವರೆಗೆ ಮೆರವಣಿಗೆ ನಡೆಯಿತು. ಸಾಧ್ವೀ ಮಾತಾನಂದ ಮಯೀ ದಿವ್ಯ ಉಪಸ್ಥಿತಿ ಕರುಣಿಸಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್, ಕೇರಳ ತುಳು ಅಕಾಡೆಮಿ ಅಧ್ಯಕ್ಷ ಉಮೇಶ್ ಸಾಲ್ಯಾನ್, ಮಲಾರ್ ಜಯರಾಮ ರೈ ಉಪಸ್ಥಿತರಿದ್ದರು.
ಒಡಿಯೂರು ಗ್ರಾಮ ವಿಕಾಸ ಯೋಜನೆಯ ವಿಸ್ತರಣಾಧಿಕಾರಿ ಸದಾಶಿವ ಅಳಿಕೆ ನಿರೂಪಿಸಿದರು. ರೇಣುಕಾ ಎಸ್ ರೈ ಪ್ರಾರ್ಥಿಸಿದರು. ತುಳು ಸಾಹಿತ್ಯ ಸಮ್ಮೇಳನ ಸಮಿತಿ ಸಂಚಾಲಕ ಡಾ. ವಸಂತಕುಮಾರ್ ಪೆರ್ಲ ಸ್ವಾಗತಿಸಿದರು. ಜಯಪ್ರಕಾಶ್ ವಂದಿಸಿದರು. ಯಶವಂತ ವಿಟ್ಲ ಪರಿಚಯಿಸಿದರು.
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…
ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…
15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…
ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…
ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…