ಒತ್ತಡಗಳ ಮಧ್ಯೆ ಪತ್ರಿಕೋದ್ಯಮ ಮೌಲ್ಯ ಕಾಪಾಡುವುದೇ ಸವಾಲು: ಮೋಹನ್ ಆಳ್ವ

November 18, 2019
6:18 PM

ಮಂಗಳೂರು: ಆಧುನಿಕ ಜೀವನದಲ್ಲಿ ವೃತ್ತಿ ಬದುಕಿನ ಒತ್ತಡಗಳ ಮದ್ಯೆ ಪತ್ರಿಕಾರಂಗದ ಮೌಲ್ಯಗಳನ್ನು ಕಾಪಾಡುವುದೇ ಮಾಧ್ಯಮ, ಪತ್ರಕರ್ತರ ನಿಜವಾದ ಸವಾಲು ಎಂದು ಆಳ್ವಾಸ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು.

Advertisement
Advertisement
Advertisement
Advertisement

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಆಯೋಜಿಸಲಾದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ನೂರು ವರ್ಷಗಳ ಅವಧಿಯಲ್ಲಿ ಮಾಧ್ಯಮದ ಬೆಳವಣಿಗೆ ವಿಸ್ತಾರವಾಗಿದೆ. ಪ್ರಸಕ್ತ ಕಾಲದಲ್ಲಿ ಹೂಡಿಕೆ ಸ್ಪರ್ಧೆಯ ನಡುವೆ ಮಾಧ್ಯಮಗಳ ಮೇಲೆ ನಿಯಂತ್ರಣ ಕಷ್ಟ ಸಾಧ್ಯ. ಮಾತ್ರವಲ್ಲದೆ ಮಾಧ್ಯಮಕ್ಕೆ ಪ್ರವೇಶಿಸುವ ಯುವ ಶಕ್ತಿಯು ಉತ್ಸಾಹದ ಭರದಲ್ಲಿ ಬರವಣಿಗೆಯ, ತಿಳುವಳಿಕೆಯ ಕೊರತೆ ಸಾಮಾನ್ಯ. ಬಹಳ ಜಾಗರೂಕತೆಯಿಂದ ಮುಂದೆ ಸಾಗಬೇಕಾಗಿದೆ. ಹಾಗೆಂದು ಋಣಾತ್ಮಕ ಚಿಂತನೆಯ ಅಗತ್ಯವಿಲ್ಲ. ಕಾಲವೇ ಎಲ್ಲವನ್ನೂ ನಿರ್ಧರಿಸುವುದರಿಂದ ಇಂತಹ ವ್ಯವಸ್ಥೆಯ ನಡುವೆಯೂ ಮಾಧ್ಯಮ ಯಾವುದರಲ್ಲೂ ರಾಜಿಯಾಗದೆ ವೌಲ್ಯವನ್ನು ಕಾಪಾಡಬೇಕಾಗಿದೆ ಎಂದರು.

Advertisement

ಸಂಘದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಭಾರತೀಯ ಕಾರ್ಯನಿರತರ ಪತ್ರಕರ್ತರ ಒಕ್ಕೂಟದ ಹೊಸದಿಲ್ಲಿಯ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ಮಾತನಾಡಿ, ಪತ್ರಿಕೋದ್ಯಮ ಇಲ್ಲದೆ ದೇಶವನ್ನು ಊಹಿಸಲು ಅಸಾಧ್ಯ. ಪತ್ರಕರ್ತನಾದವನಿಗೆ ಕೆಲಸದಲ್ಲಿ ನಿಷ್ಠೆ, ಬದ್ಧತೆಯಿರಬೇಕಾಗಿದ್ದು ಅದೇ ಪತ್ರಿಕಾ ಧರ್ಮದ ಒಳಮರ್ಮ. ಪತ್ರಿಕೋದ್ಯಮ ದಾರಿ ತಪ್ಪಿದರೆ ದೇಶ ಕುಲಗೆಟ್ಟು ಹೋಗಲಿದೆ ಎಂದರು.

Advertisement

ವೇದಿಕೆಯಲ್ಲಿ ಸಾಹಿತಿ, ಹಂಪಿ ವಿವಿಯ ವಿಶ್ರಾಂತ ಕುಲಪತಿ ಡಾ.ಬಿ.ಎ. ವಿವೇಕ ರೈ, ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮಂಜುನಾಥ ಭಂಡಾರಿ, ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ವಿಜಯ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು. ಆರ್.ಸಿ. ಭಟ್ ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ
ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |
December 26, 2024
11:28 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror