ಮಂಗಳೂರು : ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ಸಂಗ್ರಹಿಸಿರುವ ಮಿಡತೆ ಜಾತಿಗಳನ್ನು ಸೆಂಟ್ರಲ್ ಪ್ಲಾಂಟೇಷನ್ ಕ್ರಾಪ್ಸ್ ರಿಸರ್ಚ್ ಇನ್ಸ್‍ಟಿಟ್ಯೂಟ್, ನ್ಯಾಷನಲ್ ಬ್ಯುರೋ ಆಫ್ ಅಗ್ರಿಕಲ್ಚರ್ ಇನ್‍ಸೆಕ್ಟ್ ರಿಸೋರ್ಸ್‍ಸ್, ಬೆಂಗಳೂರು ಹಾಗೂ ಗಾಂಧಿ ಕೃಷಿ ವಿಜ್ಞಾನ ಕೇಂದ್ರ, ಬೆಂಗಳೂರಿಗೆ ಕಳುಹಿಸಳಾಗಿತ್ತು.
ಕೀಟಶಾಸ್ತ್ರಜ್ಞರಿಂದ ಬಂದಿರುವ ವರದಿಯ ಪ್ರಕಾರ ಕೀಟವು ಒಲಾರ್ಚಸ್ ಮಿಲಿಯಾರಿಸ್ ಮಿಲಿಯಾರಿಸ್ಸ್ ಸ್ಪಾಟೆಡ್ ಕಾಫಿ ಮಿಡತೆ ಎಂದು ಗುರುತಿಸಲ್ಪಟ್ಟಿದೆ.
ಈ ಮಿಡತೆಗಳು ದಕ್ಷಿಣ ಭಾರತದ ಪಶ್ಚಿಮಘಟ್ಟಗಳಲ್ಲಿ ಕಾಣಿಸಿಕೊಳ್ಳುತ್ತವೆ ಹಾಗೂ ಅಳವಿನಂಚಿನಲ್ಲಿರುವ ಕೀಟವಾಗಿರುತ್ತದೆ (ಇಂಟರ್‍ನ್ಯಾಷನಲ್ ಯುನಿಯನ್ ಫಾರ್ ಕನ್ಸರ್‍ವೇಷನ್ ಆಪ್ ನೇಚರ್). ಈ ಮಿಡತೆ ಕಾಫಿ, ಬಾಳೆ, ಗೇರು, ಅಡಿಕೆ, ತೆಂಗು, ಏಲಕ್ಕಿ ಹಾಗೂ ಭತ್ತದ ಬೆಳೆಯ ಮೇಲೆ ಕಾಣಿಸುವ ಸಾಧ್ಯತೆಗಳಿದ್ದು, ಇವುಗಳು ಯಾವುದೇ ಅಪಾಯಕಾರಿಯಾಗಿರುವುದಿಲ್ಲ. ಭೂಮಿಯ ಉಳುಮೆಯಿಂದ ಇವುಗಳು ಮೊಟ್ಟೆ ಹಂತದಲ್ಲಿ ನಿರ್ವಹಣೆ ಮಾಡಬಹುದಾಗಿರುತ್ತದೆ. ಮರಿ ಮಿಡತೆಗಳನ್ನು ಹಿಡಿದು ಬೇರೆಡೆಗೆ ಬಿಡಬಹುದಾಗಿದೆ. ಅಳವಿನಂಚಿನಲ್ಲಿರುವ ಈ ಕೀಟದ ನಿರ್ವಹಣೆಯನ್ನು ಎಚ್ಚರಿಕೆಯಿಂದ ಮಾಡಬೇಕಾಗಿದೆ.
ಕೀಟಬಾಧೆಯಿಂದ ಬೆಳೆ ನಾಶವಾದ ಸಂದರ್ಭದಲ್ಲಿ ಬೇವಿನ ಮೂಲದ ಕೀಟನಾಶಕಗಳನ್ನು ಅಥವಾ ಲ್ಯಾಂಬ್ಡಾ ಸೈಹಾಲೋಥ್ರಿನ್ 5 ಇಸಿ 1.5 ಮಿ.ಲೀ. ಪ್ರತಿ ಒಂದು ಲೀಟರ್ ನೀರಿನಲ್ಲಿ ಬೆರೆಸಿ ಸಿಂಪರಣೆ ಮಾಡಬಹುದಾಗಿದೆ. ಅಳವಿನಂಚಿನಲ್ಲಿರುವ ಈ ಕೀಟದ ಸಂರಕ್ಷಣೆ ಅವಶ್ಯವಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…