ಕೊಲ್ಲಮೊಗ್ರ: ಕಳೆದ 3 ವರ್ಷಗಳಿಂದ ಮೋರಿಯೊಂದು ಕುಸಿಯಲು ಸಿದ್ಧವಾಗಿದೆ. ಇಂದೋ ನಾಳೆಯೋ ಬೀಳುವ ಹಂತದಲ್ಲಿದೆ. ಹಾಗಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತಿಲ್ಲ ಅಂತ ಜನ ಬೊಬ್ಬೆ ಹೊಡೆಯುತ್ತಾರೆ. ಯಾರಾದ್ರೂ ಸ್ವಲ್ಪ ಈ ಕಡೆ ನೋಡ್ತೀರಾ ? ಹಾಗಿದ್ರೆ ಇಲ್ಲಿದೆ ನೋಡಿ ಸ್ಟೋರಿ….
ಕೊಲ್ಲಮೊಗ್ರು ಗ್ರಾಮದ ಕೊಲ್ಲಮೊಗ್ರದಿಂದ ಕಟ್ಟ – ಕರಂಗಲ್ಲು – ಮಡಪ್ಪಾಡಿಗೆ ನೇರ ಸಂಪರ್ಕ ಇರುವ ಜಿಪಂ ರಸ್ತೆ ಇದೆ. ಇಲ್ಲಿ ಕಟ್ಟ – ಮೈಲ ಎಂಬಲ್ಲಿ ಒಂದು ಮೋರಿ ಇದೆ. ಕಳೆದ ಮೂರು ವರ್ಷದ ಹಿಂದೆಯೇ ಮೋರಿಯೊಂದು ಇಂದೋ ನಾಳೆಯೋ ಅನ್ನೋ ಸ್ಥಿತಿಯಲ್ಲಿದೆ. ಹೀಗಾಗಿ ಈ ಮೋರಿ ಕುಸಿತವಾದರೆ ಸಂಪರ್ಕ ಕಡಿತವಾಗುವ ಭೀತಿ ಇದೆ. ಈ ಸಮಸ್ಯೆ ಬಗ್ಗೆ ಅನೇಕ ಬಾರಿ ಅಧಿಕಾರಿಗಳು ಬಂದು ಪರೀಕ್ಷಿಸಿ ಸದ್ಯದಲ್ಲೇ ನಿರ್ಮಾಣ ಮಾಡಿ ಕೊಡುವ ಭರವಸೆ ನೀಡಿದ್ದರೂ ಮೂರು ಮಳೆಗಾಲ ಕಳೆದು ಇನ್ನೂ ಮೋರಿ ಮಾತ್ರಾ ಆಗಿಲ್ಲ.
ಈ ವರ್ಷದ ಮಳೆಗಾಲದಲ್ಲಿ ಇಲ್ಲಿ ವಾಹನ ಸಂಚಾರ ಕಷ್ಟವಾಗಲಿದೆ, ಅದೂ ಅಲ್ಲದೆ ನಡೆದು ಹೋಗಲೂ ಕಷ್ಟವಾಗುವ ಸಂಭವ ಇದೆ ಎಂದು ಸ್ಥಳೀಯರು ಅಳಲು ತೋಡುತ್ತಾರೆ. ಎಲ್ಲಾ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದ ತಕ್ಷಣವೇ ಕ್ರಮವಾಗಬೇಕು, ಕನಿಷ್ಠ ದುರಸ್ತಿಯಾದರೂ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ಈ ಬಗ್ಗೆ ಸುಳ್ಯನ್ಯೂಸ್.ಕಾಂ ಜೊತೆ ಮಾತನಾಡಿದ ಸ್ಥಳೀಯರಾದ ಮಿಥುನ್ ಕುಮಾರ್ ಸೋನ, ” ಕಳೆದ 3 ವರ್ಷಗಳಿಂದ ಈ ಮೋರಿ ದುರಸ್ತಿಗೆ ಕ್ರಮ ಆಗಬೇಕು ಎಂದು ಒತ್ತಾಯಿಸಿದರೂ ಯಾವುದೇ ಕ್ರಮ ಆಗಿಲ್ಲ, ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು” ಎಂದು ಒತ್ತಾಯಿಸಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…