ಕಡಬ: ಕಡಬ ತಾಲೂಕು ಕುಂತೂರು ಗ್ರಾಮದ ಎಲ್ಲಾಜೆಮೂಲೆ ಬಾಬು ನಾಯ್ಕ್ ಎಂಬವರ ಮನೆಗೆ ಭಾನುವಾರ ಸಂಜೆ ಸಿಡಿಲು ಬಡಿದು ಹಾನಿಯಾಗಿದೆ. ಭಾನುವಾರ ಸಂಜೆ ಸಿಡಿಲು ಗುಡುಗು ಸಹಿತ ಮಳೆಯಾಗಿತ್ತು. ಈ ಸಂದರ್ಭ ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆ ಬಿರುಕು ಬಿಟ್ಟಿದೆ ಯಲ್ಲದೆ ವಿದ್ಯುತ್ ಪೂರೈಕೆಯ ಮೀಟರ್ ಸಂಪೂರ್ಣವಾಗಿ ಸುಟ್ಟುಹೋಗಿದೆ.
ಇಚಿಲಂಪಾಡಿ ಪ್ರದೇಶದಲ್ಲೂ ಮನೆಗೆ ಹಾನಿಯಾಗಿದೆ. ಇಚಿಲಂಪಾಡಿ ನಿವಾಸಿ ಸಾಂತಪ್ಪ ಗೌಡ ಎಂಬವರ ಮನೆಗೆ ಹಾನಿಯಾಗಿದ್ದು ಕುಟ್ರುಪ್ಪಾಡಿ ಗ್ರಾಮದ ಬಾಳಪ್ಪ ಗೌಡ ಎಂಬವರ ಮನೆಗೆ ಸಿಡಿಲು ಬಡಿದಿದೆ. ಆತೂರು ಪರಿಸರದಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗುರುಳಿದ ಪರಿಣಾಮ ಕೆಲಕಾಲ ರಸ್ತೆ ತಡೆ ಉಂಟಾಗಿತ್ತು.
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…