ಕಡಬ: ನಿವೃತ್ತ ಶಿಕ್ಷಕ, ಧಾರ್ಮಿಕ, ಸಾಮಾಜಿಕ ಹಾಗೂ ಸಾಹಿತ್ಯಿಕ ಕ್ಷೇತ್ರದಲ್ಲಿ ಸಕ್ರಿಯರೂ ಆಗಿರುವ ಪಿ. ಜನಾರ್ದನ ಗೌಡ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಕಡಬ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಇವರು ಕಡಬ ತಾಲೂಕಿನ ವಿವಿಧ ಶಾಲೆಗಳಲ್ಲಿ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿ ಮುಖ್ಯೋಪಧ್ಯಾಯರಾಗಿ ಪದೋನ್ನತಿ ಹೊಂದಿ ನಿವೃತ್ತರಾದರು. ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದ ಜನಾರ್ದನ ಗೌಡರು ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿರುವರು. ಈ ಹಿಂದೆ ಜರಗಿದ್ದ ಪುತ್ತೂರು ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಕಾರ್ಯದರ್ಶಿಯಾಗಿ ಹಾಗೂ ಪುತ್ತೂರು ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಗೌರವಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿರುವ ಜನಾರ್ದನ ಗೌಡರನ್ನು ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…