ಕಡಬ : ತಾಲೂಕಿನ ಕೊಯಿಲ, ಆತೂರು ಪರಿಸರದಲ್ಲಿ ಕಳೆದ ರಾತ್ರಿ, ಇಂದು ಬೆಳಿಗ್ಗೆ ಬೀಸಿದ ಭಾರಿ ಗಾಳಿಗೆ ವಿದ್ಯುತ್ ತಂತಿ ಮೇಲೆ ಮರಗಳು ಬಿದ್ದು ಹಲವು ವಿದ್ಯುತ್ ಕಂಬಗಳು ಧರಶಾಯಿಯಾಗಿದೆ.
ಆತೂರು ಸಮೀಪದ ಕೊಯಿಲ ಸರಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರದ ಬಳಿ ಬೃಹತ್ ಮರ ಮುರಿದು ಬಿದ್ದಿದೆ, ಕೊಯಿಲ ಗ್ರಾಮದಲ್ಲಿ ಏಣಿತ್ತಡ್ಕ ಎಂಬಲ್ಲಿ ಮರವೊಂದು ಮುರಿದು ಬಿದ್ದಿದೆ. ಇದೇ ಗ್ರಾಮದ ತಿಮರೆಗುಡ್ಡೆ ಎಂಬಲ್ಲಿ ಮರ ಬಿದ್ದಿದೆ. ಘಟನೆಯಿಂದ ಸುಮಾರು 10 ಕ್ಕೂ ಹೆಚ್ಚು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ತಿಮರೆಗುಡ್ಡೆ ಎಂಬಲ್ಲಿ ಕಂಬ ಮುರಿದು ಬಿದ್ದ ಪರಿಣಾಮ ಇಲ್ಲಿಯ ಕೃಷ್ಣಪ್ಪ ಎಂಬುವವರ ಪಂಪು ಶೆಡ್ ಗೆ ಹಾನಿಯಾಗಿದೆ. ಸಮಸ್ಯೆ ಬಗೆಹರಿಸಲು ಮೆಸ್ಕಾಂ ಸಿಬ್ದಂದಿಗಳು ಹರ ಸಾಹಸ ಪಡುತ್ತಿದ್ದಾರೆ. ನಿರಂತರ ಸುರಿಯುವ ಮಳೆಯೊಂದಿಗೆ ಭಾರಿ ಗಾಳಿ ಬೀಸುತ್ತಿರುವುದು ಸೂಸುತ್ರವಾಗಿ ಕೆಲಸ ಮುಗಿಸಲು ಸವಾಲಾಗಿದೆ.
ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ, ಜೋಳ ಮಾರಾಟಕ್ಕೆ ರೈತರ ನೋಂದಣಿ ಕಾರ್ಯವನ್ನು ಶೀಘ್ರವೇ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೇ 30 ರಿಂದ ಡಿಸೆಂಬರ್ 3 ರವರೆಗೆ ಸಾಧಾರಣ…
ಬೆಂಗಳೂರಲ್ಲಿ ಕಳೆದ ಒಂದು ವಾರದಿಂದ ಮೈಕೊರೆವ ಚಳಿ ಶುರುವಾಗಿದೆ. ಮತ್ತೊಂದೆಡೆ ಚಂಡ ಮಾರುತದ…
29.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
ಡಿಎಪಿ ರಸಗೊಬ್ಬರಗಳ ತ್ವರಿತ ಪೂರೈಕೆ ಹಾಗೂ ಲಭ್ಯತೆಯ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರವು…
ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ರಾಯಬಾಗ, ಚಿಕ್ಕೋಡಿ ಹುಕ್ಕೇರಿ ಹಾಗೂ ಬಾಗಲಕೋಟ ಜಿಲ್ಲೆಯ…