ಮಡಿಕೇರಿ : ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯ ಎದುರು ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ತೂಗು ಸೇತುವೆಯು ಈ ಬಾರಿ ಕಾವೇರಿ ನದಿಯ ಪ್ರವಾಹದಿಂದಾಗಿ ಕೊಚ್ಚಿಹೋಗಿದ್ದು, ಇದನ್ನು ಆದಷ್ಟು ಶೀಘ್ರ ಸರಿಪಡಿಸಲಾಗುವುದು ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಭರವಸೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು , ಈಗಾಗಲೇ ಈ ತೂಗು ಸೇತುವೆಯ ದುರಸ್ತಿಗೆ ಜಿಲ್ಲಾ ಪಂಚಾಯತ್ ಇಂಜಿನಿಯರ್ ವಿಭಾಗಕ್ಕೆ ಸೂಚನೆ ನೀಡಲಾಗಿದೆ. ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಗೆ ಮತ್ತೆ ಕಾವೇರಿ ನದಿಯ ನೀರಿನ ಮಟ್ಟ ಹೆಚ್ಚಾಗಿದೆ. ಈ ಸೇತುವೆ ಕೊಡಗು ಹಾಗೂ ಪಿರಿಯಾಪಟ್ಟಣ ತಾಲೂಕಿನ ಕೆಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಅತಿ ಪ್ರಮುಖ ಸಂರ್ಪಕ ಸೇತುವೆ ಯಾಗಿದ್ದು ಮುಂದಿನ 10 ದಿನಗಳ ಒಳಗೆ ಸರಿಪಡಿಸಲಾಗುವುದು ಎಂದು ನುಡಿದರು.
ನೂರಾರು ಕಾರ್ಮಿಕರು, ಶಾಲಾ ಕಾಲೇಜು ವಿಧ್ಯಾರ್ಥಿಗಳು ಈ ಸೇತುವೆಯನ್ನು ಅವಲಂಬಿಸಿದ್ದು, ಅವರಿಗೆ ತೊಂದರೆಯಾಗದ ರೀತಿಯಲ್ಲಿ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ಈ ಸಂಧರ್ಭ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಭಿಮನ್ಯು ಕುಮಾರ್ ಜಿಲ್ಲಾ ಪಂಚಾಯತ್ ಸದಸ್ಯೆ ಕೆ.ಅರ್.ಮಂಜುಳಾ, ತಾಲೂಕು ಪಂಚಾಯತ್ ಸದಸ್ಯ ಗಣೇಶ್, ಇಂಜಿನಿಯರ್ ವೀರೇಂದ್ರ ಕುಮಾರ್, ಸ್ಥಳೀಯ ಗ್ರಾಮಸ್ಥರು ಹಾಜರಿದ್ದರು.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…