ಕನಕಪುರ ಬಂಡೆಯಲ್ಲ- ವಿಧಾನಸೌಧದ ಮುಂದಿನ ‌ಚಪ್ಪಡಿಯಾಗುವೆ | ಬಿಜೆಪಿ ಎಷ್ಟೇ ಕೇಸು ಹಾಕಿಸಿದರೂ ಬಗ್ಗೋ ಜನ ನಾನಲ್ಲ | ಪದಗ್ರಹಣ ಸಮಾರಂಭದಲ್ಲಿಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ |

July 2, 2020
4:07 PM

ಬೆಂಗಳೂರು: ಕನಕಪುರ ಬಂಡೆ ಎಂದು ನನ್ನನ್ನು ಹೇಳುತ್ತಾರೆ, ಆದರೆ ನಾನು ಬಂಡೆಯಾಗಲು ಬಯಸುವುದಿಲ್ಲ, ವಿಧಾನಸೌಧದ ಮುಂದಿನ ಚಪ್ಪಡಿಯಾಗುತ್ತೇನೆ. ಕಾರ್ಯಕರ್ತರೆಲ್ಲರೂ ಅದನ್ನು ತುಳಿದುಕೊಂಡು ವಿಧಾನಸೌಧ ಏರಬೇಕು ಎಂದು ಬಯಸುತ್ತೇನೆ. ಬಿಜೆಪಿಯವರು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ಜೈಲಿಗೆ ಕಳುಹಿಸಿದ್ದರು, ಯಾವುದೇ ಕೇಸುಗಳಿಗೆ ಬಗ್ಗೋ ಜನ ನಾನಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಕೆಪಿಸಿಸಿ ಅಧ್ಯಕ್ಷರಾಗಿ 4 ತಿಂಗಳ ಹಿಂದೆ ನೇಮಕಗೊಂಡಿದ್ದ ಡಿ.ಕೆ. ಶಿವಕುಮಾರ್ ಇಂದು ಅಧಿಕೃತವಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಕೆಪಿಸಿಸಿ ಅಧ್ಯಕ್ಷನಾಗಿರಬಹುದು.ನಾನು ಕೂಡ ಕಾಂಗ್ರೆಸ್ ಕಾರ್ಯಕರ್ತನೇ. ಎಲ್ಲಾ ಸಮಸ್ಯೆಗಳನ್ನೂ ಎದುರಿಸಿದ್ದೇನೆ, ಅದು ಸ್ವಂತಕ್ಕಾಗಿ ಅಲ್ಲ ಎಂದರು. ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು.  ಗುಂಪುಗಾರಿಕೆಯಲ್ಲಿ ನನಗೆ ನಂಬಿಕೆಯಿಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror