ಕನಕಮಜಲು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಖ್ಯಾತಿಯ ನಿರ್ದೇಶಕ, ನಟ ರಿಶಬ್ ಶೆಟ್ಟಿ ಅವರೊಂದಿಗೆ ಸಂವಾದ ಕಾರ್ಯಕ್ರಮವು ಕನಕಮಜಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ರೈತಭವನದಲ್ಲಿ ನಡೆಯಿತು.
ಕರ್ನಾಟಕ ಚಲನಚಿತ್ರ ಅಕಾಡೆಮಿ ಬೆಂಗಳೂರು, ಕನಕಮಜಲು ಯುವಕ ಮಂಡಲ ಇದರ ಆಶ್ರಯದಲ್ಲಿ ಮಕ್ಕಳ ಚಲನಚಿತ್ರೋತ್ಸವ ಹಾಗೂ ನಿರ್ದೇಶಕ, ನಟ ರಿಶಬ್ ಶೆಟ್ಟಿ ಅವರೊಂದಿಗೆ ಸಂವಾದ ಕಾರ್ಯಕ್ರಮ ಕನಕಮಜಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ರೈತಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ವತಿಯಿಂದ ನಿರ್ದೇಶಕ ರಿಶಬ್ ಶೆಟ್ಟಿ, ರಂಜನ್ , ಸಪ್ತ ಹಾಗೂ ಸನಿಲ್‌ಗುರು ಅವರನ್ನು ಗಣೇಶ್ ಭಟ್ ಅವರು ಸನ್ಮಾನಿಸಿದರು.
ದಾಮೋದರ ಕಣಜಾಲು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಲಕ್ಷ್ಮೀನಾರಾಯಣ ಕಜೆಗದ್ದೆ ಕಾರ್ಯಕ್ರಮ ಸಂಯೋಜಿಸಿದರು.
ಈ ಸಂದರ್ಭ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು , ರೆಡ್ ಬಲೂನ್ ಚಲನಚಿತ್ರ ಪ್ರದರ್ಶನ ಹಾಗೂ ಭಾನುವಾರ ಬೆಳಿಗ್ಗೆ 1೦ರಿಂದ ಕಾರಂತಜ್ಜನಿಗೊಂದು ಪತ್ರ ಹಾಗೂ ರೈಲ್ವೇ ಚಿಲ್ಡ್ರನ್ ಚಿತ್ರ ಪ್ರದರ್ಶನಗೊಂಡಿತು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?