ಕನ್ನಡ ಅನುವಾದಗಳಿಂದ ವಿಶ್ವ ಸಾಹಿತ್ಯ ಪ್ರವೇಶ: ಪ್ರೊ.ಟಿ.ಪಿ.ಅಶೋಕ್

December 13, 2019
9:36 AM

ಉಜಿರೆ: ಎಲ್ಲಾ ಭಾಷೆಗಳ ಸಾಹಿತ್ಯ ಅಧ್ಯಯನ ಮಾಡಲಾಗಿದ್ದರೂ, ಇಂದಿನ ಕನ್ನಡ ಅನುವಾದಗಳು ನಮಗೆ ಆ ಸಾಹಿತ್ಯದ ಸ್ವರೂಪವನ್ನು ತೋರಿಸಿಕೊಟ್ಟಿವೆ. ಅನುವಾದಗಳಿಂದಾಗಿ ಶೇಕ್ಸ್ ಪಿಯರ್‍ನಂತಹ ವಿಶ್ವ ವಿಖ್ಯಾತ ಲೇಖಕರು ನಮಗೆ ಹತ್ತಿರವಾಗಿದ್ದಾರೆ ಎಂದು ಖ್ಯಾತ ವಿಮರ್ಶಕ ಪ್ರೊ.ಟಿ.ಪಿ.ಅಶೋಕ್ ಹೇಳಿದರು.

ಅವರು ಉಜಿರೆಯಲ್ಲಿ ಎಸ್.ಡಿ.ಎಂ.ಕಾಲೇಜಿನಲ್ಲಿ ಕನ್ನಡ ಸಂಘ ಮತ್ತು ಹೆಗ್ಗೋಡು ನೀನಾಸಂ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಆಯೋಜಿಸಿದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಗ್ರೀಕ್ ನಾಟಕಗಳು ಮನುಷ್ಯರನ್ನು ಕುಲದ ಸಮಸ್ಯೆಯ ನೆಲೆಯಲ್ಲಿ ವಿವರಿಸಿದರೆ, ಶೇಕ್ಸ್ ಪಿಯರ್ ನಾಟಕಗಳು ರಾಜಕೀಯ ವ್ಯವಸ್ಥೆಯ ಸಮಸ್ಯೆಗಳನ್ನು ಹೇಳುತ್ತವೆ ಎಂದರು.

ಎಸ್.ಡಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಸತೀಶ್ಚಂದ್ರ ಅಧ್ಯಕ್ಷತೆ ವಹಿಸಿದರು. ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಶುಭಾಶಂಸನೆ ಮಾಡಿದರು. ಕನ್ನಡ ವಿಭಾಗದ ಮುಖ್ಯಸ್ಥಡಾ. ಬಿ.ಪಿ. ಸಂಪತ್‍ಕುಮಾರ್ ಸ್ವಾಗತಿಸಿದರು. ಡಾ. ಕೆ.ವಿ. ನಾಗರಾಜಪ್ಪ ಧನ್ಯವಾದವಿತ್ತರು. ಡಾ. ಬೋಜಮ್ಮ ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror