ಉಜಿರೆ: ಎಲ್ಲಾ ಭಾಷೆಗಳ ಸಾಹಿತ್ಯ ಅಧ್ಯಯನ ಮಾಡಲಾಗಿದ್ದರೂ, ಇಂದಿನ ಕನ್ನಡ ಅನುವಾದಗಳು ನಮಗೆ ಆ ಸಾಹಿತ್ಯದ ಸ್ವರೂಪವನ್ನು ತೋರಿಸಿಕೊಟ್ಟಿವೆ. ಅನುವಾದಗಳಿಂದಾಗಿ ಶೇಕ್ಸ್ ಪಿಯರ್‍ನಂತಹ ವಿಶ್ವ ವಿಖ್ಯಾತ ಲೇಖಕರು ನಮಗೆ ಹತ್ತಿರವಾಗಿದ್ದಾರೆ ಎಂದು ಖ್ಯಾತ ವಿಮರ್ಶಕ ಪ್ರೊ.ಟಿ.ಪಿ.ಅಶೋಕ್ ಹೇಳಿದರು.
ಅವರು ಉಜಿರೆಯಲ್ಲಿ ಎಸ್.ಡಿ.ಎಂ.ಕಾಲೇಜಿನಲ್ಲಿ ಕನ್ನಡ ಸಂಘ ಮತ್ತು ಹೆಗ್ಗೋಡು ನೀನಾಸಂ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಆಯೋಜಿಸಿದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಗ್ರೀಕ್ ನಾಟಕಗಳು ಮನುಷ್ಯರನ್ನು ಕುಲದ ಸಮಸ್ಯೆಯ ನೆಲೆಯಲ್ಲಿ ವಿವರಿಸಿದರೆ, ಶೇಕ್ಸ್ ಪಿಯರ್ ನಾಟಕಗಳು ರಾಜಕೀಯ ವ್ಯವಸ್ಥೆಯ ಸಮಸ್ಯೆಗಳನ್ನು ಹೇಳುತ್ತವೆ ಎಂದರು.
ಎಸ್.ಡಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಸತೀಶ್ಚಂದ್ರ ಅಧ್ಯಕ್ಷತೆ ವಹಿಸಿದರು. ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಶುಭಾಶಂಸನೆ ಮಾಡಿದರು. ಕನ್ನಡ ವಿಭಾಗದ ಮುಖ್ಯಸ್ಥಡಾ. ಬಿ.ಪಿ. ಸಂಪತ್‍ಕುಮಾರ್ ಸ್ವಾಗತಿಸಿದರು. ಡಾ. ಕೆ.ವಿ. ನಾಗರಾಜಪ್ಪ ಧನ್ಯವಾದವಿತ್ತರು. ಡಾ. ಬೋಜಮ್ಮ ಕಾರ್ಯಕ್ರಮ ನಿರ್ವಹಿಸಿದರು.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…