Advertisement
ಸುದ್ದಿಗಳು

ಕನ್ನಡ ಸಾಹಿತ್ಯ ಪರಿಷತ್ ಸಂಪಾಜೆ ಹೋಬಳಿ ಘಟಕದ ಪದಗ್ರಹಣ

Share

ಸಂಪಾಜೆ: ಕನ್ನಡ ಸಾಹಿತ್ಯ ಪರಿಷತ್ ಸಂಪಾಜೆ ಹೋಬಳಿ ಘಟಕದ ಪದಗ್ರಹಣ ಮತ್ತು ಕೊಡಗು ಸಂಪಾಜೆ ಗ್ರಾ.ಪಂ.ಮಾಜಿ ಅಧ್ಯಕ್ಷ ಬಾಲಚಂದ್ರ ಕಳಗಿ ಸಂಸ್ಮರಣಾ ಕಾರ್ಯಕ್ರಮ ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ನಡೆಯಿತು. ಕಸಾಪ ಹೋಬಳಿ ಘಟಕದ ನೂತನ ಅಧ್ಯಕ್ಷ ಎನ್.ಸಿ‌.ಅನಂತ ಊರುಬೈಲು ಮತ್ತು ತಂಡಕ್ಕೆ ಕನ್ನಡ ಭುವನೇಶ್ವರಿಯ ಧ್ವಜವನ್ನು ಹಸ್ತಾಂತರಿಸುವ ಮೂಲಕ ಪದಗ್ರಹಣ ನೆರವೇರಿಸಲಾಯಿತು.

ಕಸಾಪ ಕೊಡಗು ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್, ಪತ್ರಕರ್ತ ಸಂತೋಷ್ ಕುಡೆಕಲ್ಲು, ಕಸಾಪ ನಿಕಟಪೂರ್ವ ಅಧ್ಯಕ್ಷ ಕುಮಾರ್, ಹೋಬಳಿ ಕಸಾಪ ಮಾಜಿ ಅಧ್ಯಕ್ಷ ಲೋಕನಾಥ್ ಅಮೆಚೂರು, ಗೌರವ ಸಲಹೆಗಾರ ವೆಂಕಪ್ಪ ಕಡಂಬಡ್ಕ ಉಪಸ್ಥಿತರಿದ್ದರು. ಕಸಾಪ ಕಾರ್ಯದರ್ಶಿ ಬಿ.ಜೆ.ಯಶೋಧರ, ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮುಖ್ಯ ಶಿಕ್ಷಕ ಕುಮಾರ್ ರವರನ್ನು ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಸಂಪಾಜೆ ಗ್ತಾಮದ ಅಭಿವೃದ್ಧಿಯ ಹರಿಕಾರ ಮಾಜಿ ಅಧ್ಯಕ್ಷ ಬಾಲಚಂದ್ರ ಕಳಗಿ ಅವರ ಸಂಸ್ಮರಣೆ ಮತ್ತು ನುಡಿನಮನ ಕಾರ್ಯಕ್ರಮ ನಡೆಯಿತು. ದಿವಂಗತ ಬಾಲಚಂದ್ರ ಕಳಗಿಯವರ ತಂದೆ ವೆಂಕಪ್ಪ ಕಳಗಿ, ಕಳಗಿಯವರ ಪತ್ನಿ ಪಂಚಾಯತ್ ಸದಸ್ಯೆ ರಮಾದೇವಿ ಕಳಗಿ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್, ಉಪಾಧ್ಯಕ್ಷ ಸುಂದರ ಬಿಸಿಲುಮನೆ, ಸಹನಾ ಕಾಂತಬೈಲು, ಜಾನಪದ ಕಲಾವಿದ ದೇವಪ್ಪ ಕೊಯನಾಡು, ಶ್ರೀ ದೇವತಾರಾಧನ ಸಮಿತಿ ಸಂಪಾಜೆ ಗೌರವಾಧ್ಯಕ್ಷ ಬಿ. ಆರ್. ಶಿವರಾಮ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ‘ಬಿ’ ಒಕ್ಕೂಟದ ಅಧ್ಯಕ್ಷೆ ಭಾರತಿ ಚಂದ್ರಶೇಖರ್, ಹಿರಿಯರಾದ ಮಾಯಿಲಪ್ಪ ಮೂಲ್ಯ, ಸಂಪಾಜೆ ಸರಕಾರಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀಧರ್ ಪಡ್ಪು, ಭರತ್ ಕೇನಾಜೆ, ಬಬಿನ್ ಹನಿಯಡ್ಕ, ರವಿರಾಜ್ ಹೊಸೂರು, ಪುರುಷೋತ್ತಮ ಬಂಗಾರಕೋಡಿ, ಅಮೃತರಾಜ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ

ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…

3 hours ago

ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…

3 hours ago

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

15 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

1 day ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

2 days ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago