ಕಬಕ : ವಿದ್ಯಾರ್ಥಿಗಳು ಶಾಲೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಆತ್ಮವಿಶ್ವಾಸ ಬೆಳೆಸಬೇಕು. ಶಿಸ್ತನ್ನು ಅಳವಡಿಸಿಕೊಂಡು ವಿದ್ಯಾಭ್ಯಾಸ ಮಾಡಿ ಹೆತ್ತವರಿಗೂ ಶಾಲೆಗೂ ಕೀರ್ತಿ ತರಬೇಕು. ಸಾಮಾಜಿಕ ಶಾಂತಿ ಕಾಪಾಡುವಲ್ಲಿ ವಿದ್ಯಾರ್ಥಿಗಳ ಪಾಲೂ ಇದೆ ಎಂದು ಸಾಮಾಜಿಕ ಮುಖಂಡ ಶಾಲಾ ಎಸ್.ಡಿ.ಎಮ್.ಸಿ ಕಾರ್ಯಾಧ್ಯಕ್ಷ ಪುರುಷೋತ್ತಮ ಮುಂಗ್ಲಿಮನೆ ಹೇಳಿದರು.
ಅವರು ಕಬಕ ಸರಕಾರಿ ಪ್ರೌಢ ಶಾಲೆಯಲ್ಲಿ ದ.ಕ. ಜಿಲ್ಲಾ ಭಾರತ್ ಸೌಟ್ಸ್ ಮತ್ತು ಗೈಡ್ಸ್ ಆಶ್ರಯದಲ್ಲಿ ಏರ್ಪಡಿಸಲಾದ ಅಬ್ಬಕ್ಕರಾಣಿ ಗೈಡ್ಸ್ ದಳವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ವಿಶ್ರಾಂತ ಯೋಧ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ತಾರನಾಥ್ ಬೋಳಾರ್ ಮಾತನಾಡಿ ಸೈನಿಕರ ತ್ಯಾಗ ಬಲಿದಾನದಿಂದಾಗಿ ನಾವು ಸುಖ ಶಾಂತಿಯಿಂದ ಬದುಕಬಹುದಾಗಿದೆ. ಸೈನ್ಯದಲಿ ಸೇರುವುದಕ್ಕೆ ಸಾಕಷ್ಟು ಅವಕಾಶಗಳಿವೆ ಎಂದರು.
ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಜಯಾನಂದ ಪೆರಾಜೆ ಅಭ್ಯಾಗತರಾಗಿ ಮಾತನಾಡಿ ಸ್ಕೌಟ್ಸ್ ಮತ್ತು ಗೈಡ್ಸ್ ದಳದ ಸೇವಾಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶಾಲೆಯಲ್ಲಿ ಗೈಡ್ಸ್ ದಳವನ್ನು ಆರಂಭಿಸಿರುವುದಕ್ಕೆ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದರು.
ಶಾಲಾ ಮುಖ್ಯೋಪಾಧ್ಯಾಯ ಶಫಿಉಲ್ಲಾ ಎಸ್. ಅಧ್ಯಕ್ಷತೆ ವಹಿಸಿ ಗೈಡ್ಸ್ ಸಂಬಂಧಿಸಿದ ಪರಿಕರಗಳನ್ನು ನೀಡಿದರು. ವಿಶ್ರಾಂತ ಯೋಧ ತಾರನಾಥ ಬೋಳಾರ್ ಮತ್ತು ನಿವೃತ್ತ ಶಿಕ್ಷಕ ಜಯಾನಂದ ಪೆರಾಜೆ ಇವರನ್ನು ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ವಿಜ್ಞಾನ ಶಿಕ್ಷಕಿ ಇಂದಿರಾ ಕೆ.ಸ್ವಾಗತಿಸಿದರು. ಗೈಡ್ಸ್ ಶಿಕ್ಷಕಿ ಶಾಂತಾ ಪ್ರಾಸ್ತಾವಿಕ ಮಾತುಗಳನ್ನಾಡಿ ಗೈಡ್ಸ್ ದಳದ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಿದರು. ಶಾನಿಯಾ ನಿರೂಪಿಸಿ, ದೈಹಿಕ ಶಿಕ್ಷಕ ಕೃಷ್ಣಯ್ಯ ಕೆ. ವಂದಿಸಿದರು.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…