ಮೈಸೂರು/ಮಡಿಕೇರಿ: ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಶ್ರೀನಿವಾಸ ಪ್ರಸಾದ್, ವಸತಿ ಸಚಿವ ವಿ.ಸೋಮಣ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ಅತಿವೃಷ್ಟಿ ಪರಿಹಾರಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಅಧ್ಯಯನ ತಂಡವೂ ಅಗಮಿಸಿ ವಾಸ್ತವ ಪರಿಶೀಲಿಸಿ ತೆರಳಲಿದೆ. ಶೀಘ್ರದಲ್ಲೇ ಕೇಂದ್ರ ಸರಕಾರದಿಂದ ಪರಿಹಾರ ದೊರೆಯುವ ನಿರೀಕ್ಷೆ ಇದೆ.ರಾಜ್ಯ ಭೇಟಿಗೆ ಆಗಮಿಸಿದ್ದ ಪ್ರಧಾನಿಯವರಿಗೆ ರಾಜ್ಯದ ಪರಿಸ್ಥಿತಿ ಬಗ್ಗೆ ವಿವರಿಸಲಾಗಿದೆ. ಶೀಘ್ರವೇ ಪರಿಹಾರ ಬಿಡುಗಡೆಯ ನಿರೀಕ್ಷೆಯಲ್ಲಿದ್ದೇವೆ. ರಾಜ್ಯ ಸರಕಾರದಿಂದ ಬೇರೆಲ್ಲಾ ಕೆಲಸಗಳನ್ನು ಬದಿಗೊತ್ತಿ ಅತಿವೃಷ್ಟಿ ಪರಿಹಾರಕ್ಕೆ ಆದ್ಯತೆ ನೀಡಲಾಗಿದೆ .ಪರಿಹಾರಕ್ಕೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…