ಗುತ್ತಿಗಾರು: ಬಾಂಧವ್ಯ ಗೆಳೆಯರ ಬಳಗದ ವತಿಯಿಂದ ಕಮಿಲದಲ್ಲಿ ನಡೆಯುತ್ತಿರುವ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಭಾನುವಾರ ಬೆಳಗ್ಗೆ ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಪತ್ರಕರ್ತ ಮಹೇಶ್ ಪುಚ್ಚಪ್ಪಾಡಿ ಉದ್ಘಾಟಿಸಿ ಶುಭಹಾರೈಸಿದರು.
ಮುಖ್ಯಅತಿಥಿಗಳಾಗಿದ್ದ ತಾಪಂ ಸದಸ್ಯ ಅಶೋಕ್ ನೆಕ್ರಾಜೆ ಮಾತನಾಡಿ, ಶ್ರೀಕೃಷ್ಣ ಬದುಕು ನಮ್ಮೆಲ್ಲರ ಬದುಕಿಗೆ ಆದರ್ಶ. ಸಾಮಾಜಿಕವಾಗಿಯೂ ಧಾರ್ಮಿಕವಾಗಿಯೂ ಶ್ರೀಕೃಷ್ಣನ ನಡೆ ಮೆಚ್ಚುವಂತಹದ್ದೇ ಹೀಗಾಗಿ ಆತ ಪರಮಾತ್ಮನಾಗಿ ನಮಗೆಲ್ಲರಿಗೂ ಮಾದರಿಯಾಗಿದ್ದಾನೆ ಎಂದರು. ಯುವ ಸಮುದಾಯವು ಸಂಘಟನಾತ್ಮಕವಾಗಿ ಮಾಡುವ ಇಂತಹ ಕಾರ್ಯಕ್ರಮಕ್ಕೆ ಸದಾ ಬಂಬಲನೀಡುವುದಾಗಿ ತಿಳಿಸಿದರು.
ಪ್ರಸ್ತಾವಿಕವಾಗಿ ಮಾತನಾಡಿದ ಶಿಕ್ಷಕ ತೇಜಪ್ಪ ಮಾಸ್ತರ್ ಸಂಪ್ಯಾಡಿ, ಯುವಕರು ನಿರಂತರವಾಗಿ ಸಮಾಜಮುಖಿಯಾಗಿ ತೊಡಗಿಸಿಕೊಂಡಾಗ ಗ್ರಾಮ ಅಭಿವೃದ್ಧಿಯಾಗಲು ಸಾಧ್ಯವಿದೆ. ಧಾರ್ಮಿಕ ಹಾಗೂ ಸಾಮಾಜಿಕವಾಗಿ ಯುವಕರು ಸಕ್ರಿಯವಾಗಿರಬೇಕು ಎಂದು ಹೇಳಿದರು.
ಸಭಾಧ್ಯಕ್ಷತೆಯನ್ನು ಬಾಂಧವ್ಯ ಗೆಳೆಯರ ಬಳಗದ ಅಧ್ಯಕ್ಷ ಪ್ರಸನ್ನ ಮುಳುಬಾಗಿಲು ವಹಿಸಿದ್ದರು.ವೇದಿಕೆಯಲ್ಲಿ ರಕ್ತೇಶ್ವರಿ ಸಾನ್ನಿಧ್ಯದ ಆಡಳಿತ ಮಂಡಳಿ ಅಧ್ಯಕ್ಷ ತುಂಗನಾಥ ಕಾಯನಕೋಡಿ, ಗ್ರಾಪಂ ಮಾಜಿ ಸದಸ್ಯ ರಾಧಾಕೃಷ್ಣ ತುಪ್ಪದಮನೆ ಮೊದಲಾದವರು ಉಪಸ್ಥಿತರಿದ್ದರು.
ಲೋಕೇಶ್ ಕಮಿಲ ಸ್ವಾಗತಿಸಿ ದಾಮೋದರ ಕಾರ್ಯಕ್ರಮ ನಿರೂಪಿಸಿದರು.
ಸಭಾಕಾರ್ಯಕ್ರಮದ ಬಳಿಕ ಮೊಸರು ಕುಡಿಕೆ ಹಾಗೂ ವಿವಿಧ ಸ್ಫರ್ಧೆಗಳು ನಡೆಯುತ್ತಿವೆ.
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …