ಕರೋನಾ ವೈರಸ್ | ಜನರ ಹಿತದೃಷ್ಟಿಗಾಗಿ ಕರ್ನಾಟಕ ಲಾಕ್ ಡೌನ್ ಗೆ ಸರಕಾರ ಚಿಂತನೆ: ಸಂಜೆಯ ವೇಳೆಗೆ ನಿರ್ಧಾರ

March 23, 2020
1:26 PM

ಬೆಂಗಳೂರು: ಕೊರೊನಾ ವೈರಸ್ ತಡೆಯ ಹಿನ್ನೆಲೆಯಲ್ಲಿ ಈಗಾಗಲೇ ಕೊರೊನಾ ವೈರಸ್ ಕಂಡುಬಂದ ರಾಜ್ಯದ 9 ಜಿಲ್ಲೆಗಳು ಮುಂಜಾಗ್ರತಾ ಕ್ರಮವಾಗಿ ಮಾ.​​ 31 ರವರೆಗೆ ಲಾಕ್ ಡೌನ್ ಮಾಡಿದರೂ ಸಹಕರಿಸದ ಕಾರಣ ಇದೀಗ ಇಡೀ ಕರ್ನಾಟಕವನ್ನು ಲಾಕ್ ಡೌನ್ ಮಾಡುವ ನಿರ್ಧಾರಕ್ಕೆ ರಾಜ್ಯ ಸರಕಾರ ಮುಂದಾಗಿದೆ. ಈ ಬಗ್ಗೆ ಸಂಜೆಯ ವೇಳಗೆ ಅಧಿಕೃತ ತೀರ್ಮಾನ ಹೊರಡಿಸುವುದಾಗಿ ಸಿಎಂ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಇದೀಗ  ವಿಪಕ್ಷ ನಾಯಕರ ಜೊತೆ ಚರ್ಚೆ ನಡೆಸುತ್ತಿದ್ದಾರೆ.

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರದ ಬಗ್ಗೆ ತೀರ್ಮಾನಿಸಲಾಗಿದೆ. ಬೆಂಗಳೂರು,  ಬೆಂಗಳೂರು ಗ್ರಾಮಾಂತರ , ಮಂಗಳೂರು, ಕಲಬುರ್ಗಿ , ಕೊಡಗು, ಮೈಸೂರು, ಚಿಕ್ಕಬಳ್ಳಾಪುರ , ಧಾರವಾಡ ಜಿಲ್ಲೆಗಳು ಲಾಕ್ ಡೌನ್ ಆಗಿತ್ತು.  ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮವನ್ನು ಈಗಾಗಲೇ ಕೈಗೊಂಡಿದ್ದರೂ ಜನರು ಸಹಕರಿಸದ ಹಿನ್ನಲೆಯಲ್ಲಿ, ಜನರ ಹಿತದೃಷ್ಟಿಗಾಗಿ ಈ ತೀರ್ಮಾನ ಕೈಗೊಂಡಿರುವುದಾಗಿ ಸಿಎಂ ತಿಳಿಸಿದರು. ಮನೆಯಲ್ಲೇ ಇರಿ, ಕೊರೋನಾ ಸೋಂಕು ತಡೆಗೆ ಸಹಕರಿಸಿ. ಜನರಿಗೆ ಪರಿಸ್ಥಿತಿಯ ಗಂಭೀರತೆಯ ಅರಿವಾಗುತ್ತಿಲ್ಲ. ಬಡವರ ಹಿತದೃಷ್ಟಿಯಿಂದ ಇಂದಿರಾ ಕಾಂಟೀನ್ ನಲ್ಲಿ ಬಡವರಿಗೆ ಉಚಿತ ಊಟ ವಿತರಿಸಲಾಗುವುದು ಎಂದು ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror