ಬೆಂಗಳೂರು: ಕೊರೊನಾ ವೈರಸ್ ತಡೆಯ ಹಿನ್ನೆಲೆಯಲ್ಲಿ ಈಗಾಗಲೇ ಕೊರೊನಾ ವೈರಸ್ ಕಂಡುಬಂದ ರಾಜ್ಯದ 9 ಜಿಲ್ಲೆಗಳು ಮುಂಜಾಗ್ರತಾ ಕ್ರಮವಾಗಿ ಮಾ. 31 ರವರೆಗೆ ಲಾಕ್ ಡೌನ್ ಮಾಡಿದರೂ ಸಹಕರಿಸದ ಕಾರಣ ಇದೀಗ ಇಡೀ ಕರ್ನಾಟಕವನ್ನು ಲಾಕ್ ಡೌನ್ ಮಾಡುವ ನಿರ್ಧಾರಕ್ಕೆ ರಾಜ್ಯ ಸರಕಾರ ಮುಂದಾಗಿದೆ. ಈ ಬಗ್ಗೆ ಸಂಜೆಯ ವೇಳಗೆ ಅಧಿಕೃತ ತೀರ್ಮಾನ ಹೊರಡಿಸುವುದಾಗಿ ಸಿಎಂ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಇದೀಗ ವಿಪಕ್ಷ ನಾಯಕರ ಜೊತೆ ಚರ್ಚೆ ನಡೆಸುತ್ತಿದ್ದಾರೆ.
ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರದ ಬಗ್ಗೆ ತೀರ್ಮಾನಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ , ಮಂಗಳೂರು, ಕಲಬುರ್ಗಿ , ಕೊಡಗು, ಮೈಸೂರು, ಚಿಕ್ಕಬಳ್ಳಾಪುರ , ಧಾರವಾಡ ಜಿಲ್ಲೆಗಳು ಲಾಕ್ ಡೌನ್ ಆಗಿತ್ತು. ಕೊರೊನಾ ತಡೆಗೆ ಕಟ್ಟುನಿಟ್ಟಿನ ಕ್ರಮವನ್ನು ಈಗಾಗಲೇ ಕೈಗೊಂಡಿದ್ದರೂ ಜನರು ಸಹಕರಿಸದ ಹಿನ್ನಲೆಯಲ್ಲಿ, ಜನರ ಹಿತದೃಷ್ಟಿಗಾಗಿ ಈ ತೀರ್ಮಾನ ಕೈಗೊಂಡಿರುವುದಾಗಿ ಸಿಎಂ ತಿಳಿಸಿದರು. ಮನೆಯಲ್ಲೇ ಇರಿ, ಕೊರೋನಾ ಸೋಂಕು ತಡೆಗೆ ಸಹಕರಿಸಿ. ಜನರಿಗೆ ಪರಿಸ್ಥಿತಿಯ ಗಂಭೀರತೆಯ ಅರಿವಾಗುತ್ತಿಲ್ಲ. ಬಡವರ ಹಿತದೃಷ್ಟಿಯಿಂದ ಇಂದಿರಾ ಕಾಂಟೀನ್ ನಲ್ಲಿ ಬಡವರಿಗೆ ಉಚಿತ ಊಟ ವಿತರಿಸಲಾಗುವುದು ಎಂದು ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…