ಬೆಂಗಳೂರು: ಕೊರೊನಾ ಭೀತಿಗೆ ದೇಶವೇ ಸ್ತಬ್ಧವಾಗಿದೆ. ಇದೀಗ ಜನಸಂದಣಿ ಹೆಚ್ಚಿರುವ ಪ್ರದೇಶಗಳನ್ನು ನಿಯಂತ್ರಣ ಮಾಡುವ ಪ್ರಯತ್ನ ನಡೆಯುತ್ತಿದೆ. ನಾಳೆಯಿಂದ ಮಾ. 31 ರವರೆಗೆ ದೇಶಾದ್ಯಂತ ರೈಲುಗಳ ಸಂಚಾರ ಸ್ಥಗಿತಗೊಳ್ಳಲಿದೆ. ಈಗಾಗಲೇ ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವ 2 ನೇ ಸ್ಟೇಜ್ ನಲ್ಲಿ ಇರುವುದರಿಂದ ಸಾಕಷ್ಟು ಮುಂಜಾಗ್ರತಾ ಕ್ರಮ ಅಗತ್ಯವಾಗಿದ್ದು, ಮಾ.31 ರ ವರೆಗೆ ಜನರೇ ಸ್ವಯಂ ನಿರ್ಬಂಧ ವಿಧಿಸಿಕೊಂಡರೆ ಕೊರೊನಾ ಹರಡುವುದು ತಡೆಯಬಹುದಾಗಿದೆ. ಅಗತ್ಯ ಬಿದ್ದರೆ ಮಾ.31 ರವರೆಗೆ ಕರ್ನಾಟಕವೂ ಲಾಕ್ ಡೌನ್ ಆಗಬೇಕಾದ ಸಂದರ್ಭದ ಬಗ್ಗೆ ಚಿಂತನೆ ನಡೆದಿದೆ ಎಂದು ಅದಿಕಾರಿಗಳ ಮೂಲಗಳು ತಿಳಿಸಿವೆ.
ಕೊರೊನಾ ವೈರಸ್ ಜನಸಂದಣಿ ಇರುವಲ್ಲಿ ವೇಗವಾಗಿ ಹರಡುವ ಸಾಧ್ಯತೆ ಇರುತ್ತದೆ ಹಾಗೂ ವಾರಗಳ ನಂತರ ಖಚಿತವಾಗಿ ಪತ್ತೆಯಾಗುವ ಕಾರಣದಿಂದ ಈಗಾಗಲೇ ಕರ್ನಾಟಕದಲ್ಲಿ ಒಟ್ಟು 21 ಮಂದಿಗೆ ಕೊರೊನಾ ವೈರಸ್ ಖಚಿತವಾಗಿತ್ತು. ಇನ್ನು ಈ ಸಂಖ್ಯೆ ಹೆಚ್ಚಾಗದಂತೆ ತಡೆಯಬೇಕಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?