ಕರ್ನಾಟಕದಲ್ಲಿ ಹೂಡಿಕೆಗೆ ಮುಂದಾದ ಲಾಕೀಡ್ ಮಾರ್ಟಿನ್ ಕಂಪೆನಿ

January 29, 2020
7:07 AM

ಬೆಂಗಳೂರು: ಏರೋಸ್ಪೇಸ್ ವಲಯದ ಮುಂಚೂಣಿಯ ಕಂಪೆನಿ ಲಾಕೀಡ್ ಮಾರ್ಟಿನ್ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದಾಗಿದ್ದು, ಕಂಪೆನಿಯ ಉಪಾಧ್ಯಕ್ಷ, ರಿಚರ್ಡ್ ಎಫ್. ಎಂಬ್ರೋಸ್ ಅವರು ಮುಖ್ಯಮಂತ್ರಿಗಳ ಭೇಟಿಯ ಮರುದಿನವೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಈ ಕುರಿತು ಪತ್ರ ಬರೆದು, ತಮ್ಮ ಕಂಪೆನಿಯ ಭಾರತದ ಮುಖ್ಯಸ್ಥರು ಸಂಪರ್ಕಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ, “ಲಾಕೀಡ್ ಮಾರ್ಟಿನ್ ಕಂಪನಿಯ ಕಾರ್ಯಕಾರಿ ಉಪಾಧ್ಯಕ್ಷ ರಿಚರ್ಡ್ ಎಫ್ ಎಂಬ್ರೋಜ್ ಬರೆದ ಪತ್ರ ಇಂದು ತಲುಪಿದೆ. ಮೇಲ್ನೊಟಕ್ಕೆ ಇದೊಂದು ಸಾಮಾನ್ಯ ಪತ್ರವೆನಿಸಿದರು ಅದರ ಗಹನತೆಯನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ. ಲಾಕೀಡ್ ಮಾರ್ಟಿನ್ ಅಮೇರಿಕಾದ ಏರೋಸ್ಪೇಸ್ ವಲಯದ ಬೃಹತ್ ಕಂಪನಿಯಾಗಿದ್ದು ಅದು ನಮ್ಮ ರಾಜ್ಯದಲ್ಲಿ ಬಂಡವಾಳ ಹೂಡಲು ಉತ್ಸುಕವಾಗಿದೆ ಎಂಬುದನ್ನು ತೋರಿಸುತ್ತದೆ. ನಮ್ಮ ದಾವೋಸ್ ಭೇಟಿ ಫಲಪ್ರದವಾಗಿದೆ ಎಂದು ಹೇಳಲು ಇದು ಒಂದು ಉದಾಹರಣೆ.
ಈ ಪತ್ರ ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಆಕರ್ಷಿಸುವ ಬಗ್ಗೆ ನಮ್ಮ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ಇದಲ್ಲದೆ ನಮ್ಮ ದಾವೋಸ್ ಭೇಟಿ ಬಗ್ಗೆ ಅನುಮಾನ ವ್ಯಕ್ತಪಡಿಸುವವರಿಗೆ ಇದು ಉತ್ತರವಾಗಿದೆ. ದಾವೋಸ್ ಭೇಟಿ ನಮ್ಮ ರಾಜ್ಯಕ್ಕೆ ಬಂಡವಾಳ ಹರಿದು ಬರುವಲ್ಲಿ ಮತ್ತು ನವೆಂಬರ್‍ನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶದಲ್ಲಿ (ಜಿ.ಐ.ಎಂ) ಯಶಸ್ವಿ ಕಾಣುತ್ತೇವೆ ಎಂಬ ನಮ್ಮ ನಂಬಿಕೆ ಗಟ್ಟಿಯಾಗಿದೆ” ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror