ಸುಳ್ಯ: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಹಾಗೂ ಸುಳ್ಯದ ಶ್ರೀ ಶಾರದಾ ಮಹಿಳಾ ಮಹಾವಿದ್ಯಾಲಯದ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಸುಳ್ಯದ ಜ್ಯೋತಿ ಸರ್ಕಲ್ ಬಳಿಯಿರುವ ಅಮೃತಭವನದಲ್ಲಿ ಜರುಗಿತು.
ವಾರ್ತಾಧಿಕಾರಿ ಖಾದರ್ ಷಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಡಿಕೇರಿ ಶಕ್ತಿ ಪತ್ರಿಕೆಯ ಸಂಪಾದಕ ಚಿದ್ವಿಲಾಸ್ ಉಪನ್ಯಾಸ ನೀಡಿದರು.
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ.ರ.ಸಾ.ಸಂಸ್ಥೆಯ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಅಶ್ರಫ್ ಕೆ.ಎಂ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್ ಎನ್.ಎ.ಕುಂಞಿ ಅಹ್ಮದ್, ದ.ಕ.ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಘಟಕದ ಅಧ್ಯಕ್ಷ ಹರೀಶ್ ಬಂಟ್ವಾಳ್, ಜೆ.ಕೆ.ರೈ ಸುಳ್ಯ, ಶಾರದಾ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲೆ ಜ್ಯೋತ್ಸ್ನಾ , ಸುಳ್ಯ ತಾಲೂಕು ಘಟಕದ ಕಾರ್ಯದರ್ಶಿ ಬಾಲಕೃಷ್ಣ ಭೀಮಗುಳಿ ಉಪಸ್ಥಿತರಿದ್ದರು. ಪತ್ರಕರ್ತ ಡಾ. ಯು.ಪಿ.ಶಿವಾನಂದ ಸನ್ಮಾನ ನೆರವೇರಿಸಿದರು. ರಕ್ತದಾನಿ ಪಿ.ಬಿ.ಸುಧಾಕರ ರೈ, ಪತ್ರಕರ್ತ ರವಿರಾಜ್ ವಳಲಂಬೆ, ಡಾ.ಹಿಮಕರ್, ರೇಡಿಯೋ ಜಾಕಿ ತ್ರಿಶೂಲ್ ಕಂಬಳ, ಪತ್ರಿಕಾ ವಿತರಕ ರಾಧಾಕೃಷ್ಣ ಜಯನಗರ, ನಾಟಿವೈದ್ಯೆ ಸರಸ್ವತಿ ಆಚಾರ್ಯ ಕಾವಿನಮೂಲೆ, ಮಡಪ್ಪಾಡಿ ಮಹಾತ್ಮಾ ಗಾಂಧಿ ಸೇವಾ ಸಂಘದ ಎಂ.ಡಿ. ವಿಜಯಕುಮಾರ್ ಅವರನ್ನು ಸನ್ಮಾನಿಸಲಾಯಿತು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?