ಸುಳ್ಯ: ಪ್ರತಿ ಗ್ರಾಮಮಟ್ಟದಲ್ಲೂ ಕರ್ನಾಟಕ ಪಬ್ಲಿಕ್ ಸ್ಕೂಲ್‍ಗಳನ್ನು ತೆರೆಯಲು ಕ್ರಮ ವಹಿಸಬೇಕೆಂದು ಸುಳ್ಯ ಶಾಸಕ ಎಸ್.ಅಂಗಾರ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿದ್ದಾರೆ.
ಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಿ, ಮನವಿ ಮಾಡಿದರು. ಇಂಗ್ಲಿಷ್ ಶಿಕ್ಷಣದ ವ್ಯಾಮೋಹದಿಂದ ಶ್ರೀಮಂತರ ಮಕ್ಕಳು ಖಾಸಗೀ ಸಂಸ್ಥೆಗಳ ಮೂಲಕ ಶಿಕ್ಷಣ ಪಡೆಯುತ್ತಾರೆ. ಆದರೆ ಬಡವರ ಮಕ್ಕಳು ಮಾತ್ರ ಸರಕಾರಿ ಕನ್ನಡ ಶಾಲೆಗಳಲ್ಲಿ ಕಲಿಯುತ್ತಿದ್ದಾರೆ. ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಕೊರತೆ ಇದ್ದು, ಕರ್ನಾಟಕ ಪಬ್ಲಿಕ್ ಸ್ಕೂಲ್‍ಗಳನ್ನು ಗ್ರಾಮ ಮಟ್ಟದಲ್ಲಿ ತೆರೆದಾಗ, ಬಡಮಕ್ಕಳಿಗೂ ಇಂಗ್ಲಿಷ್ ಶಿಕ್ಷಣ ಕೈಗೆಟಕುವಂತಾಗುತ್ತದೆ ಎಂದು ಅವರು ಮನವಿ ಮಾಡಿದರು.
ಸಚಿವರು ಮನವಿಗೆ ಸ್ಪಂದಿಸಿ, ಈ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಇದೇ ವೇಳೆ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋದಕೇತರ ಹುದ್ದೆಗಳನ್ನು ತುಂಬಲು ಕ್ರಮವಹಿಸಬೇಕೆಂದು ಸಚಿವರಲ್ಲಿ ವಿನಂತಿಸಿದರು. ಸುಳ್ಯ ತಾಲೂಕು ಪಂಚಾಯಿತಿ ಸದಸ್ಯ ರಾಧಾಕೃಷ್ಣ ಬೊಳ್ಳೂರು, ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ ಇದ್ದರು.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…