Advertisement
ಸುದ್ದಿಗಳು

ಕರ್ನಾಟಕ ಪಬ್ಲಿಕ್ ಸ್ಕೂಲ್ ಗ್ರಾಮಮಟ್ಟದಲ್ಲೂ ತೆರೆಯುವಂತೆ ಎಸ್.ಅಂಗಾರರಿಂದ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಗೆ ಮನವಿ

Share

ಸುಳ್ಯ: ಪ್ರತಿ ಗ್ರಾಮಮಟ್ಟದಲ್ಲೂ ಕರ್ನಾಟಕ ಪಬ್ಲಿಕ್ ಸ್ಕೂಲ್‍ಗಳನ್ನು ತೆರೆಯಲು ಕ್ರಮ ವಹಿಸಬೇಕೆಂದು ಸುಳ್ಯ ಶಾಸಕ ಎಸ್.ಅಂಗಾರ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿದ್ದಾರೆ.

ಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಿ, ಮನವಿ ಮಾಡಿದರು. ಇಂಗ್ಲಿಷ್ ಶಿಕ್ಷಣದ ವ್ಯಾಮೋಹದಿಂದ ಶ್ರೀಮಂತರ ಮಕ್ಕಳು ಖಾಸಗೀ ಸಂಸ್ಥೆಗಳ ಮೂಲಕ ಶಿಕ್ಷಣ ಪಡೆಯುತ್ತಾರೆ. ಆದರೆ ಬಡವರ ಮಕ್ಕಳು ಮಾತ್ರ ಸರಕಾರಿ ಕನ್ನಡ ಶಾಲೆಗಳಲ್ಲಿ ಕಲಿಯುತ್ತಿದ್ದಾರೆ. ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಕೊರತೆ ಇದ್ದು, ಕರ್ನಾಟಕ ಪಬ್ಲಿಕ್ ಸ್ಕೂಲ್‍ಗಳನ್ನು ಗ್ರಾಮ ಮಟ್ಟದಲ್ಲಿ ತೆರೆದಾಗ, ಬಡಮಕ್ಕಳಿಗೂ ಇಂಗ್ಲಿಷ್ ಶಿಕ್ಷಣ ಕೈಗೆಟಕುವಂತಾಗುತ್ತದೆ ಎಂದು ಅವರು ಮನವಿ ಮಾಡಿದರು.

ಸಚಿವರು ಮನವಿಗೆ ಸ್ಪಂದಿಸಿ, ಈ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಇದೇ ವೇಳೆ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋದಕೇತರ ಹುದ್ದೆಗಳನ್ನು ತುಂಬಲು ಕ್ರಮವಹಿಸಬೇಕೆಂದು ಸಚಿವರಲ್ಲಿ ವಿನಂತಿಸಿದರು. ಸುಳ್ಯ ತಾಲೂಕು ಪಂಚಾಯಿತಿ ಸದಸ್ಯ ರಾಧಾಕೃಷ್ಣ ಬೊಳ್ಳೂರು, ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

8 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

9 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

10 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

10 hours ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

2 days ago