ಪುತ್ತೂರು: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ರೈತ ಮುಖಂಡರ ಸಭೆ ಪುತ್ತೂರು ನೀರೀಕ್ಷಣ ಮಂದಿರದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಪೆರ್ನಾಂಡಿಸ್ ವಹಿಸಿದ್ದರು. ಹಿಂದಿನ ವರದಿಯನ್ನು ಉಪಾಧ್ಯಕ್ಷ ಶ್ರೀನಿವಾಸ್ ನಿಡಿಂಜಿ ಮಂಡಿಸಿದರು. ಲೆಕ್ಕ ಪತ್ರವನ್ನು ಉಪಾಧ್ಯಕ್ಷ ಅಲ್ವೀನ್ ಮಿನೆಜಸ್ ಮಂಡಿಸಿದರು. ಕೃಷಿ ಕ್ಷೇತ್ರದಲ್ಲಿ ನ ಪ್ರಸ್ತುತ ಸವಾಲುಗಳು ಹಾಗೂ ಮುಂದಿನ ಹೋರಾಟ ಕುರಿತು ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ವಿಚಾರ ಮಂಡಿಸಿದರು. ಜಿಲ್ಲೆಯ ರೈತರ ಪ್ರಮುಖ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಡಿ.17 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಪ್ರತಿಭಟನಾ ಸಭೆ ನಡೆಸಲು ನಿರ್ಣಯಿಸಲಾಯಿತು.
ಜಿಲ್ಲಾ ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಪೆರಾಬೆ ನಿರ್ವಹಿಸಿದರು. ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ದಿವಾಕರ ಪೈ ಮಜಿಗುಂಡಿ ಬಂಟ್ವಾಳ ತಾಲೂಕು ಅಧ್ಯಕ್ಷ ಪ್ರೇಮನಾಥ ಶೆಟ್ಟಿ ಬಾಳ್ತಿಲ, ಗೌರವಾಧ್ಯಕ್ಷ ಮೋನಪ್ಪ ಗೌಡ ಪೆರ್ನೆ, ಕೋಶಟಧಿಕಾರಿ ಶಾಹುಲ್ ಹಮೀದ್ ಕನ್ಯಾನ, ಸುಳ್ಯ ತಾಲೂಕು ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು, ಪ್ರಧಾನ ಕಾರ್ಯದರ್ಶಿ ತೀರ್ಥರಾಮ ಗೌಡ ನೆಡ್ಚಿಲು, ಸಂಚಾಲಕರಾದ ಸೆಬಾಸ್ಟಿಯನ್, ಬೆಳ್ತಂಗಡಿ ತಾಲೂಕು ಉಪಾಧ್ಯಕ್ಷ ರಮೇಶ್ ಗೌಡ ನೆರಿಯ, ಚೆಂಬು ವಲಯ ಘಟಕದ ಪ್ರ.ಕಾರ್ಯದರ್ಶಿ ವಿಜಯಕುಮಾರ್ ನಾಯ್ಕ್, ಐವರ್ನಾಡು ಗ್ರಾಮ ಘಟಕದ ಅಧ್ಯಕ್ಷರಾದ ನೂಜಾಲು ಪದ್ಮನಾಭ ಗೌಡ, ಮುಖಂಡರಾದ ರವಿ ಶೆಟ್ಟಿ ಪೆರ್ನೆ, ನಾಗೇಶ್ ಕಡೇಶ್ವಾಲ್ಯ ಹಾಗೂ ಇತರ ರೈತ ಮುಖಂಡರು ಭಾಗವಹಿಸಿದ್ದರು.
ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಅಧ್ಯಯನ ಮಾಡಲು ಶ್ರೀಲಂಕಾದಿಂದ 38 ಮಂದಿ “ಲಂಕಾ…
ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…
ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …
ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…
ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…
ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …