ಕರ್ನಾಟಕ ರಾಜ್ಯ ರೈತ ಸಂಘ ಮಾಸಿಕ ಸಭೆ

November 21, 2019
2:20 PM

ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಸುಳ್ಯ ಘಟಕದ ಮಾಸಿಕ ಸಭೆಯು ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನ.20 ರಂದು ನಡೆಯಿತು.

Advertisement

ಸಾಲ ಮನ್ನಾ ವಿಚಾರದಲ್ಲಿ ರೈತ ಮುಖಂಡರ ಸಮ್ಮುಖದಲ್ಲಿ ನೇರವಾಗಿ ಸಹಕಾರಿ ಇಲಾಖೆ ಮುಖ್ಯ ನಿಬಂಧಕರ ಜೊತೆ ಫೋನ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲಾಯಿತು. ಈ ತಿಂಗಳ ಕೊನೆಯ ಒಳಗಾಗಿ ಸಾಲ ಮನ್ನಾ ದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಕೊಡುತ್ತೇವೆ ಎಂದು ಅವರು ಭರವಸೆ ನೀಡಿದರು. ಈ ತಿಂಗಳ ಒಳಗಾಗಿ ಸಮಸ್ಯೆ ಬಗೆಹರಿಯದಿದ್ದರೆ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸುವುದೆಂದು ತೀರ್ಮಾನಿಸಲಾಯಿತು .

ಅಲೆಟ್ಟಿ, ಅಜ್ಜಾವರ, ಜಾಲ್ಸೂರು, ಉಬರಡ್ಕ, ಅರಂತೋಡು, ತೊಡಿಕಾನ, ಐವರ್ನಾಡು, ಚೊಕ್ಕಾಡಿ, ಮಡಪ್ಪಾಡಿ ಮುಂತಾದ ಹಲವಾರು ಗ್ರಾಮದ ರೈತ ಮುಖಂಡರು ಭಾಗವಹಿಸಿದ್ದರು.  ಗ್ರಾಮ ಸಮಿತಿಗಳನ್ನು ಸದ್ಯದಲ್ಲಿ ರಚಿಸಲು ನಿರ್ಧರಿಸಲಾಯಿತು. ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ ಮಾತನಾಡಿ ದೇಶಾದ್ಯಂತ ಆರ್ ಸಿಇಪಿ ಒಪ್ಪಂದದ ವಿರುದ್ದ ನಡೆದ ರೈತರ ಹೋರಾಟ ಯಶಸ್ವಿಯಾಗಿದೆ. ಈ ರೀತಿ ರೈತರು ಸಂಘಟಿತರಾಗಿ ಹೋರಾಟ ನಡೆಸಲೇ ಬೇಕಾದ ಅನಿವಾವಾರ್ಯತೆ ಈಗ ಇದೆ ಎಂದರು. ನೂತನ ದ .ಕ ಜಿಲ್ಲಾ ಅಧ್ಯಕ್ಷ ಪ್ರಕಾಶ್ ಫೆರ್ನಾಂಡಿಸ್ ಮಾತನಾಡಿ ನಮ್ಮದು ನಂಜುಂಡಸ್ವಾಮಿ ಸ್ಥಾಪಿತ ರೈತ ಸಂಘ ,ಇದು ಯಾವುದೇ ಆಮಿಷಗಳಿಗೆ ಬಲಿಯಾಗದೆ ರೈತರ ಒಳಿತಿಗಾಗಿ ಹೋರಾಡುತ್ತಿರುವ ಸಂಘಟನೆ. ಹಲವು ಜನ ರೈತರಿಗಾಗಿ ನಮ್ಮ ಸ್ವಂತ ಹಣ ಖರ್ಚು ಮಾಡಿ ಹೋರಾಡುತ್ತಿರುವ ಸಂಘಟನೆ. ಆದ್ದರಿಂದ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡೋಣ ಎಂದು ಸ್ಪೂರ್ತಿ ತುಂಬಿದರು .

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಪೆರಾಬೆ ಮಾತನಾಡಿ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ನಾವು 24 × 7 ಗಂಟೆ ತಯಾರಿದ್ದೇವೆ ಎಂದು ಭರವಸೆ ನೀಡಿದರು . ಜಿಲ್ಲಾ ಉಪಾಧ್ಯಕ್ಷ ದಿವಾಕರ ಪೈ ಮಜಿಗುಂಡಿ, ತಾಲೂಕು ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು, ಉಪಾಧ್ಯಕ್ಷ ಮುರಳಿಧರ್ ಅಡ್ಕಾರ್, ತಾಲೂಕು ಸಂಚಾಲಕ ಸಬಾಸ್ಟಿಯನ್, ತಾಲೂಕು ಖಜಾಂಜಿ ದೇವಪ್ಪ ಕುಂದಲ್ಪಾಡಿ ಉಪಸ್ಥಿತರಿದ್ದರು .

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೂಸಿನ ಮನೆ ಯೋಜನೆ | ಗ್ರಾಮೀಣ ಉದ್ಯೋಗಿ ಮಹಿಳೆಯರಿಗೆ ಅನುಕೂಲ
August 6, 2025
7:35 AM
by: The Rural Mirror ಸುದ್ದಿಜಾಲ
ಕೃಷಿ ವಲಯದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕ್ರಮ
August 6, 2025
7:22 AM
by: The Rural Mirror ಸುದ್ದಿಜಾಲ
ಈ ಬಾರಿಯ ಮಳೆಯಿಂದ ಅಡಿಕೆಗೆ ಕೊಳೆರೋಗ | ಮರ ಏರಿ ಔಷಧಿ ಸಿಂಪಡಿಸಿದ ಮಹಿಳೆ |
August 6, 2025
7:16 AM
by: ವಿಶೇಷ ಪ್ರತಿನಿಧಿ
ಉತ್ತರಾಖಂಡದಲ್ಲಿ ಮೇಘಸ್ಫೋಟದ ಭೀಕರ ದುರಂತ
August 5, 2025
11:18 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group