ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಸುಳ್ಯ ಘಟಕದ ಮಾಸಿಕ ಸಭೆಯು ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನ.20 ರಂದು ನಡೆಯಿತು.
ಸಾಲ ಮನ್ನಾ ವಿಚಾರದಲ್ಲಿ ರೈತ ಮುಖಂಡರ ಸಮ್ಮುಖದಲ್ಲಿ ನೇರವಾಗಿ ಸಹಕಾರಿ ಇಲಾಖೆ ಮುಖ್ಯ ನಿಬಂಧಕರ ಜೊತೆ ಫೋನ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲಾಯಿತು. ಈ ತಿಂಗಳ ಕೊನೆಯ ಒಳಗಾಗಿ ಸಾಲ ಮನ್ನಾ ದ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಕೊಡುತ್ತೇವೆ ಎಂದು ಅವರು ಭರವಸೆ ನೀಡಿದರು. ಈ ತಿಂಗಳ ಒಳಗಾಗಿ ಸಮಸ್ಯೆ ಬಗೆಹರಿಯದಿದ್ದರೆ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸುವುದೆಂದು ತೀರ್ಮಾನಿಸಲಾಯಿತು .
ಅಲೆಟ್ಟಿ, ಅಜ್ಜಾವರ, ಜಾಲ್ಸೂರು, ಉಬರಡ್ಕ, ಅರಂತೋಡು, ತೊಡಿಕಾನ, ಐವರ್ನಾಡು, ಚೊಕ್ಕಾಡಿ, ಮಡಪ್ಪಾಡಿ ಮುಂತಾದ ಹಲವಾರು ಗ್ರಾಮದ ರೈತ ಮುಖಂಡರು ಭಾಗವಹಿಸಿದ್ದರು. ಗ್ರಾಮ ಸಮಿತಿಗಳನ್ನು ಸದ್ಯದಲ್ಲಿ ರಚಿಸಲು ನಿರ್ಧರಿಸಲಾಯಿತು. ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ ಮಾತನಾಡಿ ದೇಶಾದ್ಯಂತ ಆರ್ ಸಿಇಪಿ ಒಪ್ಪಂದದ ವಿರುದ್ದ ನಡೆದ ರೈತರ ಹೋರಾಟ ಯಶಸ್ವಿಯಾಗಿದೆ. ಈ ರೀತಿ ರೈತರು ಸಂಘಟಿತರಾಗಿ ಹೋರಾಟ ನಡೆಸಲೇ ಬೇಕಾದ ಅನಿವಾವಾರ್ಯತೆ ಈಗ ಇದೆ ಎಂದರು. ನೂತನ ದ .ಕ ಜಿಲ್ಲಾ ಅಧ್ಯಕ್ಷ ಪ್ರಕಾಶ್ ಫೆರ್ನಾಂಡಿಸ್ ಮಾತನಾಡಿ ನಮ್ಮದು ನಂಜುಂಡಸ್ವಾಮಿ ಸ್ಥಾಪಿತ ರೈತ ಸಂಘ ,ಇದು ಯಾವುದೇ ಆಮಿಷಗಳಿಗೆ ಬಲಿಯಾಗದೆ ರೈತರ ಒಳಿತಿಗಾಗಿ ಹೋರಾಡುತ್ತಿರುವ ಸಂಘಟನೆ. ಹಲವು ಜನ ರೈತರಿಗಾಗಿ ನಮ್ಮ ಸ್ವಂತ ಹಣ ಖರ್ಚು ಮಾಡಿ ಹೋರಾಡುತ್ತಿರುವ ಸಂಘಟನೆ. ಆದ್ದರಿಂದ ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡೋಣ ಎಂದು ಸ್ಪೂರ್ತಿ ತುಂಬಿದರು .
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಪೆರಾಬೆ ಮಾತನಾಡಿ ರೈತರ ಸಮಸ್ಯೆಗಳ ಪರಿಹಾರಕ್ಕಾಗಿ ನಾವು 24 × 7 ಗಂಟೆ ತಯಾರಿದ್ದೇವೆ ಎಂದು ಭರವಸೆ ನೀಡಿದರು . ಜಿಲ್ಲಾ ಉಪಾಧ್ಯಕ್ಷ ದಿವಾಕರ ಪೈ ಮಜಿಗುಂಡಿ, ತಾಲೂಕು ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು, ಉಪಾಧ್ಯಕ್ಷ ಮುರಳಿಧರ್ ಅಡ್ಕಾರ್, ತಾಲೂಕು ಸಂಚಾಲಕ ಸಬಾಸ್ಟಿಯನ್, ತಾಲೂಕು ಖಜಾಂಜಿ ದೇವಪ್ಪ ಕುಂದಲ್ಪಾಡಿ ಉಪಸ್ಥಿತರಿದ್ದರು .
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…