ಸುಳ್ಯ: ಕರ್ನಾಟಕ ಸೆಕ್ಷನ್ ಮ್ಯಾನೇಜಿಂಗ್ ಕಮಿಟಿಯ ಸದಸ್ಯತನಕ್ಕೆ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಷನ್ ನವದೆಹಲಿ ನಡೆಸಿದ ಚುನಾವಣೆಯಲ್ಲಿ ಸುಳ್ಯದ ಶಶಾಂಕ್ ಎಂ.ಗೌಡ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿದ್ದಾರೆ.
ಇವರು ಮೂಡಬಿದಿರೆಯ ಯೆನೆಪೊಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಷನ್ ನಡೆಸಿದ ಚುನಾವಣೆಗೆ ಕರ್ನಾಟಕದಿಂದ ಒಟ್ಟು ಹದಿನೆಂಟು ಸಾವಿರ ಮತಗಳಿದ್ದವು. ಕರ್ನಾಟಕ
ದಿಂದ ಹನ್ನೆರಡು ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಚುನಾವಣೆಗೆ ಇದರಲ್ಲಿ ಐದು ಮಂದಿಯಷ್ಟೇ ಆಯ್ಕೆಯಾಗಿದ್ದಾರೆ. ಈ ಸದಸ್ಯತ್ವವು 2020ರಿಂದ 2024ರವರೆಗೆ 5 ವರ್ಷಗಳ ಅವಧಿಯದ್ದಾಗಿರುತ್ತದೆ.
ಇವರು ಸುಳ್ಯ ಕೆ.ವಿ.ಜಿ. ಪಾಲಿಟೆಕ್ನಿಕ್‌ನಲ್ಲಿ ಆಯ್ಕೆ ಶ್ರೇಣಿ ಉಪನ್ಯಾಸಕರಾಗಿರುವ ಮಧುಕುಮಾರ್ ಬಿ. ಆರ್ ಮತ್ತು ಬಿ.ಟಿ.ಜಯಲಕ್ಷ್ಮಿಯವರ ಪುತ್ರ. ಇವರ ಪತ್ನಿ ಭಾರ್ಗವಿ ಕೆ.ಅರ್. ಮೂಡುಬಿದಿರೆ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಗೆಲುವಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.