ಸುಳ್ಯ: ವಿದ್ಯಾರ್ಥಿಗಳು ಭವಿಷ್ಯದಲ್ಲಿ ದೇಶವನ್ನು ಮುನ್ನೆಡೆಸುವ ಪ್ರಜೆಗಳಾಗಿದ್ದು ವಿದ್ಯಾರ್ಥಿಗಳು ಜೀವನದಲ್ಲಿ ವಿದ್ಯಾರ್ಜನೆಯೊಂದಿಗೆ ಶಿಸ್ತು ಪ್ರಾಮಾಣಿಕತೆಯನ್ನು ಅಳವಡಿಸಿಕೊಳ್ಳಿ ಎಂದು ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ತೇಜೇಶ್ವರ್ ಕುಂದಲ್ಪಾಡಿ ಹೇಳಿದರು.
ಅವರು ಸುಳ್ಯ ಗಾಂದಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್‍ನ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಯಾವುದೇ ಒಂದು ರಾಜಕೀಯ ಪಕ್ಷದ ಪ್ರೇರಿತವಾಗಿರುವುದು ಕಲಿಕೆಯ ಮೇಲೂ ಪರಿಣಾಮ ಬೀರುತ್ತದೆ.ಈ ನಿಟ್ಟಿಲ್ಲಿ ವಿದ್ಯಾರ್ಥಿಗಳು ತಮ್ಮ ಶಾಲಾ ಜೀವನದಲ್ಲಿ ರಾಜಕೀಯಕ್ಕೆ ಇಳಿಯಬಾರದು.ಸರಕಾರಿ ಶಾಲೆಗಳು ಉಳಿಯಬೇಕಾದರೆ ಶಾಲೆಗೆ ಉತ್ತಮ ಫಲಿತಾಂಶ ಬರಬೇಕು.ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು,ಶಿಕ್ಷಕರು ಪ್ರಯತ್ನ ಮಾಡಬೇಕಾಗಿದೆ ಎಂದು ಹೇಳಿದರು.
ಶಾಲಾ ಮುಖ್ಯ ಶಿಕ್ಷಕಿ ನಳೀನಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಾಲೇಜು ವಿಭಾಗದ ಆಂಗ್ಲಭಾಷಾ ಶಿಕ್ಷಕ ಅಬ್ದುಲ್‍ಸಮದ್ , ಹೈಸ್ಕೂಲ್ ವಿಭಾಗದ ಕನ್ನಡ ಶಿಕ್ಷಕ ಅರುಣಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.ವಿದ್ಯಾರ್ಥಿ ನಾಯಕ ಮಹಮ್ಮದ್ ಶಕೀರ್ ಹಾಗೂ ಶಾಲಾ ಮಂತ್ರಿಗಳು,ವಿವಿಧ ಸಂಘದ ಅಧ್ಯಕ್ಷರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಕ ಚಿನ್ನಪ್ಪ ಗೌಡ ಪ್ರಾಸ್ತವಿಕವಾಗಿ ಮಾತನಾಡಿದರು.ವಿದ್ಯಾರ್ಥಿನಿ ದಿವ್ಯ ಸ್ವಾಗತಿಸಿ,ಭವ್ಯ ವಂದಿಸಿದರು.ಮುಬಿನ ಕಾರ್ಯಕ್ರಮ ನಿರೂಪಿಸಿದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?