ಸುಳ್ಯ: ಸುಳ್ಯ ತಾಲೂಕಿನ ಕೊಲ್ಲಮೊಗ್ರ ಗ್ರಾಮ ಕಲ್ಮಕಾರಿನಲ್ಲಿ ತೆರೆಯಲಾದ ನೆರೆ ಪರಿಹಾರ ಕೇಂದ್ರಕ್ಕೆ ಶಾಸಕ ಎಸ್.ಅಂಗಾರ ಶನಿವಾರ ಭೇಟಿ ನೀಡಿದರು.
Advertisement
ಕೊಲ್ಲಮೊಗ್ರ ಗ್ರಾಮದ ಕಲ್ಮಕಾರಿನಲ್ಲಿ ಗುಡ್ಡ ಕುಸಿಯುವ ಮತ್ತು ಪ್ರಳಯದ ಭೀತಿಯಿಂದ ಮುಂಜಾಗೃತಾ ಕ್ರಮವಾಗಿ ಪ್ರದೇಶದ ಎಂಟು ಕುಟುಂಬಗಳ ಸುಮಾರು 25 ಮಂದಿಯನ್ನು ಕಲ್ಮಕಾರಿನ ರಂಗಮಂದಿರಕ್ಕೆ ಸ್ಥಳಾಂತರಿಸಲಾಗಿತ್ತು. ಕೇಂದ್ರದಲ್ಲಿ ಪರಿಶೀಲನೆ ನಡೆಸಿದ ಶಾಸಕರು ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು. ಎಲ್ಲಾ ಸಹಾಯವನ್ನು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
Advertisement
ಜಿಲ್ಲಾ ಪಂಚಾಯತ್ ಸದಸ್ಯೆ ಆಶಾ ತಿಮ್ಮಪ್ಪ, ತಾಲೂಕು ಪಂಚಾಯತ್ ಸದಸ್ಯ ಉದಯ ಕೊಪ್ಪಡ್ಕ, ಕೊಲ್ಲಮೊಗ್ರ ಗ್ರಾಮ ಪಂಚಾಯತ್ ಅಧ್ಯಕ್ಷೆ ವೀಣಾ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ತಾಲೂಕು ಆರೋಗ್ಯಾಧಿಕಾರಿ ಡಾ.ಸುಬ್ರಹ್ಮಣ್ಯ, ದೇವರಾಜ್ ಮುತ್ಲಾಜೆ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಶಾಸಕರು ಕುಸಿತ ಭೀತಿ ಇರುವ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement