ಕಲ್ಮಡ್ಕ ಸಹಕಾರಿ ಸಂಘ ಶತಮಾನೋತ್ಸವ ಸಂಭ್ರಮ ಸಮಾರೋಪ

November 17, 2019
8:21 PM

ಸುಳ್ಯ: ಪ್ರಜಾಪ್ರಭುತ್ವದ ತೊಟ್ಟಿಲಾಗಿರುವ ಸಹಕಾರಿ ಸಂಸ್ಥೆಗಳು ದೇಶದ ಬೆಳವಣಿಗೆಗೆ ಅದ್ಭುತ ಕೊಡುಗೆ ನೀಡಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದ್ದಾರೆ.

Advertisement
Advertisement

ಸುಳ್ಯ ತಾಲೂಕಿನ ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಸ್ಥಾಪನೆಯಾಗಿ ನೂರು ಸಂವತ್ಸರಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಎರಡು ದಿನಗಳ ಕಾಲ ನಡೆದ ಶತಮಾನೋತ್ಸವ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ನಮ್ಮ ಹಿರಿಯರು ಜೀವನವನ್ನೇ ಮುಡಿಪಾಗಿಟ್ಟು ಸ್ವಾತಂತ್ರ್ಯ ಗಳಿಸಿ ಕೊಟ್ಟ ಕಾರಣ ಮತ್ತು ಹೊಟ್ಟೆ ಕಟ್ಟಿ ಸಹಕಾರ ಕ್ಷೇತ್ರವನ್ನು ಬೆಳೆಸಿದ ಕಾರಣ ಭಾರತ ಇಂದು ಸೂಪರ್ ಪವರ್ ಆಗುವತ್ತ ಮುನ್ನಡೆದಿದೆ ಮತ್ತು ಪ್ರತಿಯೊಬ್ಬರ ಜೀವನ ಮಟ್ಟ ಸುಧಾರಿಸಲು ಕಾರಣವಾಗಿದೆ. ದೇಶದಲ್ಲಿ ಎಂಟೂವರೆ ಲಕ್ಷ ಸಹಕಾರಿ ಸಂಸ್ಥೆಗಳು ಕಾರ್ಯಾಚರಿಸುತ್ತಿರುವುದರಿಂದ ಭಾರತ ಎಲ್ಲಾ ಕ್ಷೇತ್ರಗಳಲ್ಲಿಯೂ ಅದ್ಭುತ ಶಕ್ತಿಯಾಗಿ ಬೆಳೆಯಲು ಕಾರಣವಾಗಿದೆ ಎಂದು ಅವರು ಹೇಳಿದರು.

Advertisement

ಕಲ್ಮಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪಿ.ಉದಯ ಕುಮಾರ್ ಬೆಟ್ಟ ಅಧ್ಯಕ್ಷತೆ ವಹಿಸಿದ್ದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಎಸ್. ದೇವರಾಜ್, ತಾ.ಪಂ ಸದಸ್ಯ ಅಬ್ದುಲ್ ಗಫೂರ್, ಜಿಲ್ಲಾ ಸಹಕಾರಿ ಯೂನಿಯನ್‍ನ ಮಾಜಿ ಜಿಲ್ಲಾಧ್ಯಕ್ಷ ಪಿ.ಬಿ.ದಿವಾಕರ ರೈ, ಜಿಲ್ಲಾ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಾ ಕೋಲ್ಚಾರ್, ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ, ಕಲ್ಮಡ್ಕ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ಜಾಕೆ ಮಾಧವ ಗೌಡ, ಬಾಲಕೃಷ್ಣ ಗೌಡ ಮೂಲೆಮನೆ, ಗ್ರಾ.ಪಂ.ಅಧ್ಯಕ್ಷ ಧರ್ಮಣ್ಣ ನಾಯ್ಕ ಗರಡಿ, ಸುಳ್ಯ ಎಪಿಎಂಸಿ ಉಪಾಧ್ಯಕ್ಷ ಸಂತೋಷ್‍ಕುಮಾರ್ ಜಾಕೆ ಅತಿಥಿಗಳಾಗಿ ಭಾಗವಹಿಸಿದ್ದರು.

ಸಂಘದ ಮಾಜಿ ಅಧ್ಯಕ್ಷರುಗಳನ್ನು, ಪೂರ್ವ ನಿರ್ದೇಶಕರುಗಳನ್ನು, ನಿವೃತ್ತ ಕಾರ್ಯನಿರ್ವಹಣಾಧಿಕಾರಿಗಳನ್ನು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸದಸ್ಯರನ್ನು ಸನ್ಮಾನಿಸಲಾಯಿತು. ಆರು ಬಾರಿ ಶಾಸಕರಾದ ಎಸ್. ಅಂಗಾರರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

Advertisement

ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷ ಕೆ.ಕೆ.ನಾರಾಯಣ ಚಳ್ಳಂಗಾರು, ಸಂಘದ ಉಪಾಧ್ಯಕ್ಷ ಎ.ಗಂಗಾಧರ ಗೌಡ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸುಬ್ರಹ್ಮಣ್ಯ ಜೋಷಿ.ಕೆ. ನಿರ್ದೇಶಕರಾದ ಕೆ.ಶಂಕರನಾರಾಯಣ ಭಟ್, ಮಹಾಬಲ.ಕೆ, ಸುಧಾ ಎಸ್.ಭಟ್, ಲಲಿತ.ಪಿ, ಮಹಮ್ಮದ್ ಹನೀಫ್, ರಾಮನಾಯ್ಕ.ಯು, ಕರುಣಾಕರ.ಜೆ, ಉಪಸ್ಥಿತರಿದ್ದರು. ಶತಮಾನೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಲಕ್ಷ್ಮೀನಾರಾಯಣ ನಡ್ಕ ಸ್ವಾಗತಿಸಿದರು. ಕೆ.ಟಿ.ವಿಶ್ವನಾಥ ಮತ್ತು ನಳಿನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 21-05-2024 | ರಾಜ್ಯದ ಹಲವು ಕಡೆ ಮುಂದುವರಿದ ಮಳೆ | ಮೇ.23 ನಂತರ ಮಳೆ ಕಡಿಮೆ |
May 21, 2024
1:04 PM
by: ಸಾಯಿಶೇಖರ್ ಕರಿಕಳ
ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!
May 20, 2024
9:20 PM
by: The Rural Mirror ಸುದ್ದಿಜಾಲ
ಗ್ಯಾರಂಟಿಗಳೂ ಮುಂದುವರೆಯುತ್ತವೆ | ಅಭಿವೃದ್ಧಿಯೂ ನಿಲ್ಲಲ್ಲ : ಒಂದು ವರ್ಷ ಪೂರೈಸಿ ಕಾಂಗ್ರೆಸ್‌ ಸರ್ಕಾರ | ಗ್ಯಾರಂಟಿಗಳಿಗೆ ವಾರೆಂಟಿ ಕೊಟ್ಟ ಸಿಎಂ |
May 20, 2024
5:31 PM
by: The Rural Mirror ಸುದ್ದಿಜಾಲ
ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ
May 20, 2024
2:34 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror