ಕಳಂಜ : ಕಳಂಜ ಗ್ರಾಮ ಪಂಚಾಯತ್‍ನ 2018-19ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ಪಂಚಾಯತ್ ಅಧ್ಯಕ್ಷೆ ಯಶೋಧ.ಎಂ ಅಧ್ಯಕ್ಷತೆಯೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಜಮಾಬಂದಿ ಅಧಿಕಾರಿಯಾಗಿ ಉಪಸ್ಥಿತರಿದ್ದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ದಯಾವತಿ ಮಾತನಾಡಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಮಹಿಳೆಯರಿಗೂ ವಿಶೇಷ ಅವಕಾಶಗಳು ಇದೆ. ವಸತಿ ಯೋಜನೆಗಳಿಗೆ ಸರ್ಕಾರದಿಂದ ವಿವಿಧ ಯೋಜನಾ ಖೋಟದ ಅಡಿಯಲ್ಲಿ ಸಹಾಯ ಪಡೆಯಲು ಸಾಧ್ಯವಿದೆ ಎಂದರು.
ವಸತಿ ಯೋಜನೆಗೆ ಸಂಬಂಧಿಸಿದ ಪ್ರಧಾನ ಮಂತ್ರಿ ಆವಾಝ್ ಯೋಜನೆ, ಹಿಂದುಳಿದವರಿಗೆ ಇರುವ ಅಂಬೇಡ್ಕರ್ ವಸತಿ ಯೋಜನೆಗಳ ಕುರಿತು ಸಮಗ್ರ ಮಾಹಿತಿಯನ್ನು ಸಹಾಯಕ ಯೋಜನಾಧಿಕಾರಿ ಗ್ರಾಮಸ್ಥರಿಗೆ ತಿಳಿಸಿದರು. ಸಾರ್ವಜನಿಕರ ಪ್ರಶ್ನೋತ್ತರ ಹಾಗು ಸಮಸ್ಯೆಗಳಿಗೆ ಸಹಾಯಕ ಯೋಜನಾಧಿಕಾರಿ ಉತ್ತರಿಸಿದರು. ಆರೋಗ್ಯ ರಕ್ಷಣೆ ಹಾಗು ಸಾಂಕ್ರಾಮಿಕ ರೋಗಗಳ ಕುರಿತು ಕಳಂಜ ಉಪಾರೋಗ್ಯ ಕೇಂದ್ರದ ಸಹಾಯಕಿ ಬೇಬಿ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಕಳಂಜ ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮೀಶ ಕಜೆಮೂಲೆ, ಸೌಮ್ಯ, ಪುಷ್ಪಾವತಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಧರ್ ಕೆ.ಆರ್ ಉಪಸ್ಥಿತರಿದ್ದರು. ಪಂಚಾಯತ್ ಗುಮಾಸ್ತ ತಿರುಮಲೇಶ್ವರ ಸ್ವಾಗತಿಸಿ, ಜಮಾಬಂದಿ ವರದಿ ವಾಚಿಸಿದರು. ಸಿಬ್ಬಂದಿ ಪುರುಷೋತ್ತಮ ವಂದಿಸಿದರು. ಮೋನಪ್ಪ ಕೋಡಿಯಡ್ಕ ನಿರೂಪಿಸಿದರು.
ಬಿಎಲ್‍ಆರ್ 08ಸೆಪ್ಟೆಂಬರ್01- ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಸಹಾಯಕ ಯೋಜನಾಧಿಕರಿ ದಯಾವತಿ ನೀಡಿದರು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…