Advertisement
ಸುದ್ದಿಗಳು

ಕಳಂಜ ಗ್ರಾಮ ಪಂಚಾಯತ್ ಜಮಾಬಂದಿ

Share

ಕಳಂಜ : ಕಳಂಜ ಗ್ರಾಮ ಪಂಚಾಯತ್‍ನ 2018-19ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ಪಂಚಾಯತ್ ಅಧ್ಯಕ್ಷೆ ಯಶೋಧ.ಎಂ ಅಧ್ಯಕ್ಷತೆಯೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಜಮಾಬಂದಿ ಅಧಿಕಾರಿಯಾಗಿ ಉಪಸ್ಥಿತರಿದ್ದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ದಯಾವತಿ ಮಾತನಾಡಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಮಹಿಳೆಯರಿಗೂ ವಿಶೇಷ ಅವಕಾಶಗಳು ಇದೆ. ವಸತಿ ಯೋಜನೆಗಳಿಗೆ ಸರ್ಕಾರದಿಂದ ವಿವಿಧ ಯೋಜನಾ ಖೋಟದ ಅಡಿಯಲ್ಲಿ ಸಹಾಯ ಪಡೆಯಲು ಸಾಧ್ಯವಿದೆ ಎಂದರು.
ವಸತಿ ಯೋಜನೆಗೆ ಸಂಬಂಧಿಸಿದ ಪ್ರಧಾನ ಮಂತ್ರಿ ಆವಾಝ್ ಯೋಜನೆ, ಹಿಂದುಳಿದವರಿಗೆ ಇರುವ ಅಂಬೇಡ್ಕರ್ ವಸತಿ ಯೋಜನೆಗಳ ಕುರಿತು ಸಮಗ್ರ ಮಾಹಿತಿಯನ್ನು ಸಹಾಯಕ ಯೋಜನಾಧಿಕಾರಿ ಗ್ರಾಮಸ್ಥರಿಗೆ ತಿಳಿಸಿದರು. ಸಾರ್ವಜನಿಕರ ಪ್ರಶ್ನೋತ್ತರ ಹಾಗು ಸಮಸ್ಯೆಗಳಿಗೆ ಸಹಾಯಕ ಯೋಜನಾಧಿಕಾರಿ ಉತ್ತರಿಸಿದರು. ಆರೋಗ್ಯ ರಕ್ಷಣೆ ಹಾಗು ಸಾಂಕ್ರಾಮಿಕ ರೋಗಗಳ ಕುರಿತು ಕಳಂಜ ಉಪಾರೋಗ್ಯ ಕೇಂದ್ರದ ಸಹಾಯಕಿ ಬೇಬಿ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಕಳಂಜ ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮೀಶ ಕಜೆಮೂಲೆ, ಸೌಮ್ಯ, ಪುಷ್ಪಾವತಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀಧರ್ ಕೆ.ಆರ್ ಉಪಸ್ಥಿತರಿದ್ದರು. ಪಂಚಾಯತ್ ಗುಮಾಸ್ತ ತಿರುಮಲೇಶ್ವರ ಸ್ವಾಗತಿಸಿ, ಜಮಾಬಂದಿ ವರದಿ ವಾಚಿಸಿದರು. ಸಿಬ್ಬಂದಿ ಪುರುಷೋತ್ತಮ ವಂದಿಸಿದರು. ಮೋನಪ್ಪ ಕೋಡಿಯಡ್ಕ ನಿರೂಪಿಸಿದರು.
ಬಿಎಲ್‍ಆರ್ 08ಸೆಪ್ಟೆಂಬರ್01- ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಸಹಾಯಕ ಯೋಜನಾಧಿಕರಿ ದಯಾವತಿ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

50 minutes ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

2 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

2 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

12 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

12 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

17 hours ago