ಮಂಗಳೂರು: ವಿದೇಶಗಳಿಂದ ಆಗುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮ ಆಮದನ್ನು ತಡೆಯುವ ಕುರಿತು ಕೇಂದ್ರ ಸರಕಾರವು ಗಮನಹರಿಸಬೇಕು ಹಾಗೂ ವಿದೇಶದಿಂದ ಅಕ್ರಮವಾಗಿ ಬರುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಲೋಕಸಭೆಯಲ್ಲಿ ಸರಕಾರವನ್ನು ಒತ್ತಾಯಿಸಿದ್ದಾರೆ.
ಬುಧವಾರದಂದು ಲೋಕಸಭೆಯ ಶೂನ್ಯವೇಳೆಯಲ್ಲಿ ಅಡಿಕೆ ಬೆಳೆಗಾರರ ಸಂಕಷ್ಟದ ಬಗ್ಗೆ ಧ್ವನಿ ಎತ್ತಿದ ಸಂಸದ ನಳಿನ್ ಕುಮಾರ್ ಕಟೀಲು, ಅಡಿಕೆ ಆಮದು ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಸಂಸದರು ಕೇಂದ್ರ ಸರಕಾರವನ್ನು ಆಗ್ರಹಿಸಿದರು. ಅಡಿಕೆ ಕೃಷಿಯನ್ನೇ ನಂಬಿ ಬದುಕು ಸಾಗಿಸುತ್ತಿರುವ ಸಾವಿರಾರು ರೈತ ಕುಟುಂಬಗಳು ಇವೆ. ಅಡಿಕೆ ಬೆಳೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೆ ಕೃಷಿಕರು ಕಂಗಾಲಾಗಿರುತ್ತಾರೆ. ಕೇಂದ್ರ ಸರಕಾರವು ಈ ಕೂಡಲೇ ಮಧ್ಯಪ್ರವೇಶಿಸಿ ಅಡಿಕೆ ಬೆಳೆಗೆ ಬೆಂಬಲ ಬೆಲೆ ಮತ್ತು ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಕೇಂದ್ರ ಸರಕಾರವನ್ನು ಸಂಸದರು ಆಗ್ರಹಿಸಿದರು.
ದೇಶದಲ್ಲಿ ಅಡಿಕೆ ಮಧ್ಯವರ್ತಿಗಳು ಪ್ರಮುಖವಾಗಿ ನೆರೆಯ ಬಾಂಗ್ಲಾ, ಬರ್ಮಾ, ನೇಪಾಳ, ಶ್ರೀಲಂಕಾ ಹಾಗೂ ಮಲೇಶಿಯಾ ದೇಶಗಳಿಂದ ಕಳಪೆ ಗುಣಮಟ್ಟದ ಅಡಿಕೆಯನ್ನು ಕಸ್ಟಂ ತೆರಿಗೆ ವಂಚಿಸಿ ಗಡಿಪ್ರದೇಶದಿಂದ ಅಕ್ರಮವಾಗಿ ಆಮದು ಮಾಡಿಕೊಳ್ಳುತ್ತಿರುವುದರಿಂದ ಹಾಗೂ ಕೊಳೆರೋಗ ಮತ್ತು ಹಳದಿರೋಗಳಗಳಂತಹ ರೋಗಗಳಿಗೆ ತುತ್ತಾಗಿ ಮಾರುಕಟ್ಟೆಯಲ್ಲಿ ದೇಶೀಯ ಅಡಿಕೆಗೆ ಬೆಲೆ ಕುಸಿಯುತ್ತಿದೆ. ಅಡಿಕೆ ಮಧ್ಯವರ್ತಿಗಳು ಕಸ್ಟಂ ತೆರಿಗೆ ವಂಚಿಸಿ ಮಾಡುತ್ತಿರುವ ಈ ಅಕ್ರಮ ಆಮದಿನಿಂದಾಗಿ ಕೇಂದ್ರ ಸರಕಾರಕ್ಕೆ ವರ್ಷಕ್ಕೆ ಸುಮಾರು ರೂ.5,000 ಕೋಟಿಗಿಂತಲೂ ಅಧಿಕ ನಷ್ಟ ಉಂಟಾಗುತ್ತಿದೆ ಎಂದರು. ಆದುದರಿಂದ ಕೇಂದ್ರ ಸರಕಾರ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…