ಮಡಿಕೇರಿ: ಕಳ್ಳತನ ಮಾಡಲು ಬಂದ ವ್ಯಕ್ತಿಗೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಕರಿಕೆ ಗ್ರಾಮದಲ್ಲಿ ನಡೆದಿದೆ. ಗುಂಡು ಹೊಡೆದ ಕೃಷಿಕನನ್ನು ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ ಕರಿಕೆ ಗ್ರಾಮ ಕೃಷಿಕ ಮಂದೇಡಿ ಹೊನ್ನಪ್ಪ ಅವರ ಮನೆ ಆವರಣಕ್ಕೆ ಪ್ರವೇಶಿಸಿದ ಕುಂಡತ್ತಿಕಾನ ಗ್ರಾಮದ ದೇವಂಗೋಡಿ ಗಣೇಶ್ ಅಡಿಕೆ ಕಳ್ಳತನಕ್ಕೆ ಮುಂದಾಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಹೊನ್ನಪ್ಪ ಅವರು ತಮ್ಮ ಬಳಿ ಇದ್ದ ಬಂದೂಕಿನಿಂದ ಗುಂಡು ಹಾರಿಸಿದ್ದು, ಗಣೇಶ್ ಸ್ಥಳದಲ್ಲೇ ಮೃತ ಪಟ್ಟಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಗುಂಡು ಹಾರಿಸಿದ ಕೃಷಿಕ ಮಂದೇಡಿ ಹೊನ್ನಪ್ಪ ಅವರನ್ನು ಭಾಗಮಂಡಲ ಪೊಲೀಸರು ಬಂಧಿಸಿದ್ದಾರೆ. ಮೃತ ಗಣೇಶ್ ವಿರುದ್ಧ ಈ ಹಿಂದೆ ಸುಳ್ಯ, ಭಾಗಮಂಡಲ ಹಾಗೂ ಕೇರಳದಲ್ಲೂ ಕಳ್ಳತನದ ಪ್ರಕರಣಗಳು ದಾಖಲಾಗಿವೆ ಎಂದು ಹೇಳಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel